ಕನ್ನಡ ವಿಷಯದಲ್ಲಿ ರ್‍ಯಾಂಕ್ ಪಡೆದ ಪದ್ಮಾ

ರಾಯಚೂರು,ಜೂ.೦೨-
ಜಿಲ್ಲೆಯ ಸಿಂಧನೂರು ನಗರದ ಸರಕಾರಿ ಮಹಾವಿದ್ಯಾಲಯದ ಪದವಿ ವಿದ್ಯಾರ್ಥಿನಿ ಪದ್ಮಾ ಯಮನಪ್ಪ ಪದವಿ ಐಚ್ಚಿಕ ಕನ್ನಡ ವಿಷಯದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ರ್‍ಯಾಂಕ್ ಪಡೆದಿದ್ದಾಳೆ ಎಂದು ವಿವಿಯ ಮೌಲ್ಯಮಾಪನ ಕುಲ ಸಚಿವರಾದ ಪ್ರೊಫೆಸರ್ ಜ್ಯೋತಿಧಾಮ ಪ್ರಕಾಶ್ ತಿಳಿಸಿದ್ದಾರೆ.
ಗುಲ್ಬರ್ಗ ವಿವಿಯ ೪೧ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಗೆ ಚಿನ್ನದ ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಪದ್ಮಾ ಅವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಸಿ.ಬಿ ಚಿಲ್ಕರಾಗಿ ಹಾಗೂ ಕಾಲೇಜಿನ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.