ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಪ್ರವಾಸ

ಕಲಬುರಗಿ.ಮೇ.20:ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಬೆಂಗಳೂರಿನಿಂದ ರೈಲಿನ ಮೂಲಕ ಬುಧವಾರ ಮೇ 24 ರಂದು ಬೆಳಿಗ್ಗೆ 6 ಗಂಟೆಗೆ ಕಲಬುರಗಿ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 11.15 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿರುವ “ಹತ್ತರ ಕನ್ನಡಕೆ ಗುಣಾಗ್ರಣಿ ಪ್ರಶಸ್ತಿ ಪ್ರದಾನ” ಸಮಾರಂಭವನ್ನು ಉದ್ಘಾಟಿಸುವರು.
ಅಂದು ಮಧ್ಯಾಹ್ನ 2.30 ಗಂಟೆಗೆ ಕಲಬುರಗಿ ಜಿಲ್ಲಾ ಸಾಹಿತಿಗಳು, ಕಲಾವಿದರು, ಕನ್ನಡಪರ ಸಂಘಟಕರನ್ನು ಭೇಟಿಯಾಗಿ ಕನ್ನಡ ಕಾರ್ಯಚಟುವಟಿಕೆಗಳ ಕುರಿತಂತೆ ಚರ್ಚಿಸುವರು. ರಾತ್ರಿ 8.35 ಗಂಟೆಗೆ ಕಲಬುರಗಿಯಿಂದ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.