ಕನ್ನಡ ಹಬ್ಬ ಆಚರಣೆ


 ದಾವಣಗೆರೆ. ನ.೧೪; ಕನ್ನಡ ರಾಜ್ಯೋತ್ಸವದ ಅಂಗವಾಗಿ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ  ಕನ್ನಡ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಾಂಶುಪಾಲರು ಮತ್ತು ನಿರ್ದೇಶಕರಾದ ಡಾ.ಗಣೇಶ್ ಡಿ ಬಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕನ್ನಡ ಭಾಷೆಯ ಮಹತ್ವ ಮತ್ತು ಸಂಸ್ಕೃತಿಯ  ಕೊಡುಗೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.