ಕನ್ನಡದ ಡೊಳ್ಳುಗೆ ಎರಡನೇ ಅತ್ಯುತ್ತಮ ಚಿತ್ರ ,ತಲೆ ದಂಡಕ್ಕೆ ಪರಿಸರ ಪ್ರಶಸ್ತಿ ರಾಷ್ಟ್ರೀಯ ಚಲನಚಿತ್ರ ಗರಿ

ನವದೆಹಲಿ, ಜು.22- ನಿರ್ದೇಶಕ ಪವನ್‌‌ ಒಡೆಯಾರ್ ‌ನಿರ್ಮಾಣ ಹಾಗು ನಿರ್ದೇಶಕ ಸಾಗರ್ ಪುರಾಣಿಕ್ ನಿರ್ದೇಶನ‌ದ ಕನ್ನಡದ ಚಿತ್ರ ” ಡೊಳ್ಳು” ಗೆ ಎರಡನೇ ಅತ್ಯುತ್ತಮ‌ ಚಿತ್ರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.

ಕನ್ನಡದ ಡೊಳ್ಳು ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಅಲ್ಲದೇ ಗಿರೀಶ್ ಕಾಸರವಳ್ಳಿ ನಿರ್ದೇಶನದ ” ನಾದದ ನವನೀತ” ಅತ್ಯುತ್ತಮ ಕಲಾತ್ಮಕ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಸಂಚಾರಿ ವಿಜಯ್ ಅಭಿನಯದ ತಲೆದಂಡ ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ ಪ್ರಶಸ್ತಿ ಪಡೆದಿದೆ.

ನಿರ್ದೇಶಕ ಪವನ್ ಒಡೆಯರ್ ಮೊದಲ ಬಾರಿಗೆ ನಿರ್ಮಾಣ ಮಾಡಿದ್ದರು. ಅತ್ಯುತ್ತಮ ಚಿತ್ರ ಪ್ರಶಸ್ತಿ ಜೊತೆಗೆ ಅತ್ಯುತ್ತಮ‌ ದ್ವನಿ ಮುದ್ರಣಕ್ಕೂ ಡೊಳ್ಳುಗೆ ಪ್ರಶಸ್ತಿ ಬಂದಿದೆ.

30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಭತ್ತಳಿಕೆ ಸೇರಿದೆ.

ಡೊಳ್ಳು ಕುಣಿತದ ಸುತ್ತ ಸಾಗುವ ಈ ಸಿನಿಮಾವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದು, ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

ಚಿತ್ರರಂಗಕ್ಕೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಬ್ಯಾನರ್ ಮೂಲಕ ಪತ್ನಿ ಅಪೇಕ್ಷಾ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದಾರೆ.

ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿದ್ದ ಟೀಸರ್ ಭಾರೀ ಸದ್ದು ಮಾಡಿತ್ತು

ಅನಂತ್ ಕಾಮತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾ ಕೈಚಳಕ ಇರುವ ಈ ಚಿತ್ರ ಶೀರ್ಘದಲ್ಲಿಯೇ ತೆರೆಗೆ ಬರಲಿದೆ.

ತಲೆ ದಂಡಕ್ಕೂ ಪ್ರಶಸ್ತಿ:

ದಿವಂಗತ ನಟ ರಾಷ್ಟ್ರಪ್ರಶಸ್ತಿ ವಿಜೇಯ ನಟ ಸಂಚಾರಿ ವಿಜಯ್ ಅಭಿನಯದ ಚಿತ್ರ ತಲೆ‌ ದಂಡಕ್ಕೆ ಅತ್ಯುತ್ತಮ ಪರಿಸರ ಕಾಳಜಿಯ ರಾಷ್ಟ್ರೀಯ ಪ್ರಶಸ್ತಿಯ ಗರಿ ಮುಡಿಗೇರಿದೆ.

ಗಿರೀಶ್ ಕಾಸರವಳ್ಳಿ ನಿರ್ದೇಶನದ ನಾದದ ನವನೀತ ಅತ್ಯುತ್ತಮ ಕಲಾತ್ಮಕ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ.