ಕಪ್ಪು ಪತ್ರ ಮಂಡಿಸಿಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ನವದೆಹಲಿ,ಫೆ.೮- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ೧೦ ವರ್ಷಗಳ ಸಾಧನೆಯ ’ಶ್ವೇತಪತ್ರ ಹೊರಡಿಸುವ ಬಿಜೆಪಿ ಸರ್ಕಾರದ ಕ್ರಮಕ್ಕೆ ಪ್ರತಿಯಾಗಿ ಪ್ರತಿಪಕ್ಷ ಕಾಂಗ್ರೆಸ್ ‘ಕಪ್ಪು ಕಾಗದ’ ಬಿಡುಗಡೆ ಮಾಡಿದ್ದು ಆಡಳಿತ ಪ್ರತಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.
ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಇಂದು ಬೆಳಗ್ಗೆ ಕಪ್ಪು ಪತ್ರ ಬಿಡುಗಡೆ ಮಾಡಿದ್ದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ಹತ್ತು ವರ್ಷದ ಅವಧಿಯಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಸರ್ಕಾರ ಎಂದಿಗೂ ಹೇಳುವುದಿಲ್ಲ. ಮನ್ರೇಗಾ ಹಣ ಬಿಡುಗಡೆಯಲ್ಲಿ ರಾಜ್ಯಗಳಿಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ನೇರವಾಗಿ ರಾಜ್ಯಗಳ ವಿರುದ್ಧ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ವಿಚಾರವಾದಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾಗಾಂಧಿ ಅವರ ಮೇಲೆ ಬಿಜೆಪಿ ನಡೆಸಿದ ವಾಗ್ದಾಳಿಗೆ ಪ್ರತಿಕ್ರಿಯಿಸಿದ ಅವರು ದೇಶದಲ್ಲಿ ಆಡಳಿತ ಮಾಡುತ್ತಿದ್ದೀರಿ, ಹಣದುಬ್ಬರವನ್ನು ನಿಯಂತ್ರಿಸಲು ನೀವು ಏನು ಕ್ರಮ ಕೈಗೊಂಡಿದ್ದೀರಿ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.
೨೦೧೪ರಲ್ಲಿ ಅಧಿಕಾರಕ್ಕೆ ಬಂದ ನಂತರದ ಬಿಜೆಪಿ ಸರ್ಕಾರದ ಶ್ವೇತಪತ್ರದ ಹಿಂದೆಯೇ ಕಾಂಗ್ರೆಸ್ ನ ಈ ಕ್ರಮ ಕೈಗೊಂಡಿದೆ. ಫೆಬ್ರವರಿ ೧ರಂದು ತಮ್ಮ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರ ಉಭಯ ಸದನಗಳಲ್ಲಿ ‘ಶ್ವೇತಪತ್ರ’ ಮಂಡಿಸಲಿದೆ ಎಂದು ಘೋಷಿಸಿದ್ದರು.೨೦೧೪ ರವರೆಗೆ ಎಲ್ಲಿದ್ದೇವೆ ಮತ್ತು ಈಗ ನಾವು ಎಲ್ಲಿದ್ದೇವೆ ಎಂಬುದನ್ನು ನೋಡಲು”. ಶ್ವೇತ ಪತ್ರ ಹೊರಡಿಸುವುದಾಗಿ ಪ್ರಕಟಿಸಿದ್ದರು. ಅದರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಪ್ಪು ಪತ್ರ ಬಿಡುಗಡೆ ಮಾಡಿ ಆಕ್ರೋಶ ಹೊರಹಾಕಿದೆ.
ಮಾತಿನ ಚಕಮಕಿ:
ಬಜೆಟ್ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಕೋಲಾಹಲ ನಡೆದಿದೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರ ಸರ್ಕಾರ ದೇಶವನ್ನು ಹೇಗೆ ತಿರುಗಿಸಿದೆ ಎಂಬುದನ್ನು ಒತ್ತಿ ಹೇಳಿದರು.
ಹಿಂದಿನ ಯುಪಿಎ ಸರಕಾರಗಳ ವಿರುದ್ಧ ಪ್ರಧಾನಿಯವರು ಲೆಕ್ಕವಿಲ್ಲದಷ್ಟು ಸುಳ್ಳು ಮಾತುಗಳನ್ನು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ನಿರುದ್ಯೋಗ ದರ ಏರಿಕೆ, ಸರಾಸರಿ ಜಿಡಿಪಿ ಬೆಳವಣಿಗೆ ದರ ಕುಸಿತ ಮತ್ತು ಹಾಲಿ ಸರಕಾರದ ಅಡಿಯಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳನ್ನು ಏಖೆ ತುಂಬಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ನೇರ ವಾಗ್ದಾಳಿ ನಡೆಸಿದ್ದಾರೆ.
೧೦ ವರ್ಷ ಅಧಿಕಾರದಲ್ಲಿದ್ದರೂ ತಮ್ಮ ಬಗ್ಗೆ ಮಾತನಾಡುವ ಬದಲು ಕಾಂಗ್ರೆಸ್ ಪಕ್ಷವನ್ನು ಮಾತ್ರ ಟೀಕಿಸುತ್ತಾರೆ.ಇಂದಿಗೂ ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಅಸಮಾನತೆಯ ಬಗ್ಗೆ ಮಾತನಾಡಿಲ್ಲವೇ ‘ಮೋದಿ ಕಿ ಗ್ಯಾರಂಟಿ’ ಸುಳ್ಳನ್ನು ಹರಡಲು ಮಾತ್ರ ಎಂದು ಆರೋಪಿಸಿದ್ದಾರೆ.
ಬಿಜೆಪಿ ತಿರುಗೇಟು
ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರ ತೊರೆದಾಗ ಮತ್ತು ಬಿಜೆಪಿ ಆಡಳಿತ ಬಂದ ನಂತರ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸರಿ ದಾರಿಗೆ ತಂದಿದೆ ಎಂದು ಬಿಜೆಪಿ ನಾಯಕ ಜಯಂತ್ ಸಿನ್ಹಾ ಹೇಳಿದ್ದಾರೆ.
ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ೨೦೧೩ ರಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ ಭಾರತ ಜಾಗತಿಕವಾಗಿ ‘ದುರ್ಬಲವಾದ ಐದು’ ಆರ್ಥಿಕತೆಗಳಲ್ಲಿ ಒಂದಾಗಿತ್ತು. ಈಗ ವಿಶ್ವದ ಪ್ರಮುಖ ಆರ್ಥಿಕ ದೇಶಗಳಲ್ಲಿ ಒಂದಾಗಿದೆ ಎಂದಿದ್ದಾರೆ.