ಕಮಲಾಪುರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರಾಸಾಯನಿಕ ಸಿಂಪಡಣೆ

ಹೊಸಪೇಟೆ(ವಿಜಯನಗರ),ಜೂ.02 : ಕೊರಾನಾ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಹೊಸಪೇಟೆ ಅಗ್ನಿಶಾಮಕ ಠಾಣೆಯ ವತಿಯಿಂದ ಕಮಲಾಪುರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ರಾಸಾಯನಿಕ ಸಿಂಪಡಣೆ ಮಾಡಲಾಯಿತು.
ಮೂಲಭೂತ ಸೌಕರ್ಯ, ಹಜ್ ಮತ್ತು ವಕ್ಫ್ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹಾಗೂ ಸಹಾಯಕ ಆಯುಕ್ತರ ನಿರ್ದೇಶನದ ಮೇರೆಗೆ ಕಮಲಾಪುರ ಗ್ರಾಮದ ವಿವಿಧ ವಾರ್ಡ್‍ಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ.