ಕಮಲ್ ಅಭಿಮಾನಿಗಳಿಗೆ ಸಿಹಿ ಸುದ್ದಿ : 232ನೇ ಚಿತ್ರದ ಘೋಷಣೆ

ಚೆನ್ನೈ, ಸೆ 17 – ಖ್ಯಾತ ನಟ ಕಮಲ್ ಹಾಸನ್ ಅವರನ್ನು ತೆರೆಯ ಮೇಲೆ ನೋಡಲು ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸದ್ಯ ರಾಜಕಾರಣದ ಜತೆಗೆಇಂಡಿಯನ್ -2 ಚಿತ್ರದಲ್ಲಿ ಬಹುಸಿಯಾಗಿರುವ ಕಮಲ್‍, ಇದೀಗ 232ನೇ ಸಿನಿಮಾದ ಘೋಷಣೆ ಮಾಡಿದ್ದಾರೆ.

ತಮಿಳಿನ ಯಶಸ್ವಿ ನಿರ್ದೇಶಕ ಲೋಕೇಶ್ ಕನಗರಾಜ್, ಕಮಲ್ ಹಾಸನ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಚಿತ್ರದ ಫಸ್ಟ್ ಲುಕ್ ಶೇರ್ ಮಾಡಿರುವ ಕಮಲ್ ಹಾಸನ್ ‘ಹೊಸ ಜರ್ನಿ ಆರಂಭವಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಚಿತ್ರಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡುತ್ತಿದ್ದಾರೆ. ಕಮಲ್ ಹಾಸನ್ ಹೋಮ್ ಬ್ಯಾನರ್ ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ಮೂಲಕ ಸಿನಿಮಾ ಮೂಡಿ ಬರುತ್ತಿದೆ.

ಲೋಕೇಶ್ ಕನಗರಾಜ್ ಕೈದಿ ಸಿನಿಮಾ ಮೂಲಕ ತಮಿಳು ಪ್ರೇಕ್ಷಕರ ಮನಗೆದ್ದಿರುವ ನಿರ್ದೇಶಕ. ಕೈದಿ ಯಶಸ್ಸಿನ ಬೆನ್ನಲ್ಲೇ ದಳಪತಿ ವಿಜಯ್ ಗೆ ‘ಮಾಸ್ಟರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಮಾಸ್ಟರ್ ರಿಲೀಸ್ ಗೂ ಮೊದಲೇ ಕಮಲ್ ಹಾಸನ್ ಗೆ ನಿರ್ದೇಶನ ಮಾಡಲು ಮುಂದಾಗಿದ್ದಾರೆ.

ಕಮಲ್ ಹಾಸನ್ ಮತ್ತು ರಜನಿಕಾಂತ್ ಒಟ್ಟಿಗೆ ಸಿನಿಮಾ ಮಾಡುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿತ್ತು. ರಜನಿಕಾಂತ್ ಸಿನಿಮಾಗೆ ಕಮಲ್ ಹಾಸನ್ ನಿರ್ಮಾಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಈ ಸಿನಿಮಾದಲ್ಲಿ ರಜನಿಕಾಂತ್ ಸಹ ನಟಿಸುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.