ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಮನವಿ

ಬೆಂಗಳೂರು ಜ.೨-ಕೊರೋನಾ ಸಂಕಷ್ಟ ಕಾಲದಲ್ಲಿ ತೊಂದರೆಗೀಡಾಗಿರುವ ದೇಶದ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಸಂಗೀತ ನಿರ್ದೇಶಕ ವಿ. ಮನೋಹರ್ ಹೇಳಿದ್ದಾರೆ.

ಕೊರೋನಾ ಸಂಕಷ್ಟ ಕಾಲದಲ್ಲಿ ಕಲಾವಿದರುಗಳು ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಲಾಕ್ ಡೌನ್ ನಂತರದಲ್ಲೂ ಪರಿಸ್ಥಿತಿ ಬದಲಾಗಿಲ್ಲ. ಇಂತಹ ಕರಕುಶಲಕಾರರಿಗೆ ಹಾಗೂ ಅವರ ಕಲೆಗೆ ಸೂಕ್ತ ಮಾರುಕಟ್ಟೆ ಒದಗಿಸುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ

ಬೆಂಗಳೂರು ಆರ್ಟ್ಸ್ ಮತ್ತು ಕ್ರಾಫ್ಟ್ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಲಾವಿದರನ್ನು ಕರ್ನಾಟಕ ಚಿತ್ರಕಲಾ ಪರಿಷತ್ತಿನಂತಹ ಸಂಸ್ಥೆಗಳು ಒಳ್ಳೆಯ ಕಾರ್ಯವನ್ನು ನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಸಕಾರಾತ್ಮಕವಾಗಿ ಬದಲಾಗುವ ಮೂಲಕ ನಿರೀಕ್ಷೆಯಿದ್ದು, ಕಲಾವಿದರುಗಳಿಗೆ ಒಳ್ಳೆಯ ದಿನಗಳು ಮರಳಲಿವೆ ಎಂದು ಆಶಿಸಿದರು

ಜನವರಿ ೧೦ ರ ವರೆಗೆ ನಡೆಯಲಿದೆ ಕಲಾವಸ್ತು ಪ್ರದರ್ಶನ ನಡೆಯಲಿದೆ.ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತೆಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುಲಿವೆ.

ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಅಪ್ಪಾಜಯ್ಯ, ಚಿತ್ರ ನಟ ನಿರಂಜನ್, ರೂಪದರ್ಶಿ ಹಾಗೂ ನಟಿ ಐಶಾನ ಸಣ್ಣಪ್ಪನವರ್ ಮತ್ತಿತರಿದ್ದರು