ಕರಟಕ ದಮನಕ ಜೋಡಿ ಶಿವಣ್ಣ ಪ್ರಭುದೇವ ಮೋಡಿ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿರ್ಮಾಣದ “ ಕಾಟೇರ” ಚಿತ್ರ ಭರ್ಜರಿ ಯಶಸ್ಸು ಗಳಿಸಿದ ಬೆನ್ನಲ್ಲೇ ಬಹುತಾರಾಗಣದ “ಕರಟಕ ದಮನಕ” ಚಿತ್ರ ರಾಜ್ಯಾದ್ಯಂತ ಮೋಡಿ ಮಾಡಲು ನಾಳೆಯಿಂದ ಬರುತ್ತಿದೆ.
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ ಚಿತ್ರವನ್ನು ವಿಕಟಕವಿ ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದಾರೆ.
ಚಿತ್ರ ಆರಂಭವಾದಾಗಿನಿಂದ ಒಂದಲ್ಲಾ ಒಂದು ಕಾರಣದಿಂದ ಕುತೂಹಲ ಕೆರಳಿಸಿರುವ ಚಿತ್ರ ಟ್ರೈಲರ್ ಹಾಡುಗಳು ಮತ್ತು ಶಿವಣ್ಣ ಮತ್ತು ಪ್ರಭುದೇವ ಕಾಂಬಿನೇಷನ್ ಚಿತ್ರದ ಬಗ್ಗೆ ನಿರೀಕ್ಷೆ ದುಪ್ಪಟ್ಟಾಗುವಂತೆ ಮಾಡಿದೆ.
ಚಿತ್ರದ “ಡೀಗ ಡಿಗರಿ” ಹಾಡನ್ನು ದುರದ ಅಬುದಾಬಿಯಲ್ಲಿ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದ ಬಗ್ಗೆ ವಿದೇಶದಲ್ಲಿಯೂ ಕ್ರೇಜ್ ಹೆಚ್ಚುವಂತೆ ಮಾಡಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಸಿನಿ ಪ್ರಿಯರನ್ನು ಮೋಡಿ ಮಾಡಿದೆ.
“ಕರಟಕ ದಮನಕ” ಎಂದರೆ ಎರಡು ಕುತಂತ್ರಿ ನರಿಗಳ ಹೆಸರು.ಉತ್ತರ ಕರ್ನಾಟಕದಲ್ಲಿ ನಡೆಯುವ ಕಥೆ. ಈ ಚಿತ್ರ ನೋಡಿದ ಪ್ರತಿಯೊಬ್ಬ ವ್ಯಕ್ತಿಗೂ ಅವನ ಊರು, ಆ ಊರಿನಲ್ಲಿ ಎಳೆದ ತೇರು ಹಾಗೂ ಅವನು ಯಾವ ನೀರು ಕುಡಿದು ಬೆಳೆದಿದ್ದಾನೋ ಆ ನೀರು ನೆನಪಾಗುತ್ತದೆ ಎಂದು ನಿರ್ದೇಶಕ ಯೋಗರಾಜ ಭಟ್ ಮತ್ತು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮಾತು.
ಎಲ್ಲರಿಗೂ ಒಂದು ಊರು ಇರುತ್ತದೆ. ಆ ಊರನ್ನು ಬಿಟ್ಟು ಬಂದ ಮೇಲೆ ಪುನಃ ಹೋದಾಗ ಅಲ್ಲಿ ಸಾಕಷ್ಟು ಬದಲಾವಣೆ ಆಗಿರುತ್ತದೆ. ಆ ವಿಷಯ ಇಟ್ಟುಕೊಂಡು ಸಾಕಷ್ಟು ಮನೋರಂಜನೆಯ ಅಂಶಗಳೊಂದಿಗೆ ಕಥೆ ಎಣೆದಿದ್ದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರಲು ಸಜ್ಜಾಗಿದೆ.
ಚಿತ್ರದಲ್ಲಿ ಶಿವರಾಜ್ ಕುಮಾರ್, ಪ್ರಭುದೇವ , ತೆಲುಗಿನ ಹೆಸರಾಂತ ಪೊ?ಷಕ ನಟ ಕನಿಕರ ಭರಣಿ, ಮುಖ್ಯಮಂತ್ರಿ ಚಂದ್ರು, ಚಿತ್ರದ ನಾಯಕಿಯಾದ ನಿಶ್ವಿಕ, ಪ್ರಿಯಾನಂದ್ ಸೇರಿದಂತೆ ಅನೇಕ ಕಲಾವಿದರ ದಂಡೇ ಇದ್ದು ಅಭಿಮಾನಿಗಳನ್ನು ತುದಿಗಾಲ ಮೇಲೆ ನಿಲ್ಲಿಸುವಂತೆ ಮಾಡಿದೆ.