ಕರಟಕ ದಮನಕ ಮೊದಲ ನೋಟ ಬಿಡುಗಡೆ

ಹ್ಯಾಟ್ರಿಕ್ ಹೀರೋ ಶಿವಣ್ಣ  ಹಾಗು ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಜೊತೆಯಾಗಿ  ಅಭಿನಯಿಸಿರುವ ‘ಕರಟಕ ದಮನಕ’ ಮೊದಲ ನೋಟ ಬಿಡುಗಡೆಯಾಗಿದೆ. ಚಿತ್ರಕ್ಕೆ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳಿದ್ದು ರಾಕ್‍ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ.

‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು “ಕರಟಕ” ಇನ್ನೊಂದರ ಹೆಸರು “ದಮನಕ”. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ ಎನ್ನುವ ಮೂಲಕ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ ನಿರ್ದೇಶಕ ಯೋಗರಾಜ್ ಭಟ್,

ಚಿತ್ರವನ್ನು   ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ರವಿ ಚಿತ್ರಕ್ಕೆ ಕಥೆ ರಚಿಸಿದ್ದು, ಚಿತ್ರಕಥೆಯನ್ನು ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.