ಕರಾಟೆ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಸರ್ಟಿಫಿಕೇಟ್ ಹಾಗೂ ಕಲರ್ ಬೆಲ್ಟ್ ವಿತರಣೆ

ಕಲಬುರಗಿ:ಮೇ.15: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಹಾಗೂ ಅಜಯಕುಮಾರ್ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ನಗರದ ಅಳಂದ ಚೆಕ್ ಪೆÇೀಸ್ಟ್ ಹತ್ತಿರದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಟ್ರೈನಿಂಗ್ ಕ್ಯಾಂಪ್ ಹಾಗೂ ಕಲರ್ ಬೆಲ್ಟ್ ಎಕ್ಸಾಮ್ ಏರ್ಪಡಿಸಲಾಯಿತು.
ಆಶೀರ್ವಾದ ಕಲ್ಯಾಣ ಮಂಟಪದ ಮಾಲೀಕರಾದ ಹನುಮಂತ್ ರೆಡ್ಡಿ ಅವರು ಮಾತನಾಡಿ ಆತ್ಮ ರಕ್ಷಣೆ ಕಲೆಯು ವಿದ್ಯಾರ್ಥಿಗಳಿಗೆ ಅತ್ಯಾವಶ್ಯಕ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನಿಂದ ಆಗಮಿಸಿದ ಮಾಸ್ಟರ್ ಶ್ರೀನಿವಾಸ್ ರವರು ವಿದ್ಯಾರ್ಥಿಗಳ ಪರೀಕ್ಷೆಯನ್ನು ವೀಕ್ಷಿಸಿ ಆರು ಜನ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಸರ್ಟಿಫಿಕೇಟ್ ಹಾಗೂ ಅನೇಕ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಡಿಸ್ಟ್ರಿಕ್ಟ್ ಚೀಫ್ ಕೋಚ್ ರಾಜವರ್ಧನ್ ಜಿ ಚೌಹಾಣ್, ಶ್ರೀಕಾಂತ್ ಪೀಸಾಳ, ಅಂಬರೀಶ್ ಜೋಗಿ, ಪ್ರತಾಪ್ ಸಿಂಗ್ ಪವರ್, ಪ್ರೇಮಕುಮಾರ್ ಸೇರಿದಂತೆ ಕರಾಟೆ ವಿದ್ಯಾರ್ಥಿಗಳು, ಪೆÇೀಷಕರು ಇದ್ದರು.