ಕರಾಟೆ ವಿದ್ಯಾರ್ಥಿಗಳ ಸಾಧನೆ

ಬಬಲೇಶ್ವರ: ಎ.14:ತಾಲೂಕಿನ ಕೃಷ್ಣಾ ನಗರದ ಶ್ರೀ ಬಿ .ಟಿ. ಪಾಟೀಲ ಮೆಮೋರಿಯಲ್, ನಂದಿ ಅಂತರಾಷ್ಟ್ರೀಯ ವಸತಿ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಬೆಂಗಳೂರಿನ ಆರ್.ಟಿ. ನಗರದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೇಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಾಧನೆ ಮೆರೆದಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಿದ 27 ಕರಾಟೆ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 08 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಾಗೂ 06 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಪ್ರಾಂಶುಪಾಲರು, ಕಾರ್ಯದರ್ಶಿಗಳು, ಸಿಬ್ಬಂದಿ ಹಾಗೂ ನಂದಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಮೆಚ್ಚುಗೆ ಪಡಿಸಿದ್ದಾರೆ.
ನಂದಿ ಅಂತರ್‍ರಾಷ್ಟ್ರೀಯ ವಸತಿ ಶಾಲೆಯ ಕರಾಟೆ ತಂಡವು ನಂದಿ ಶಾಲೆಯ ಕೀರ್ತಿಯನ್ನು ರಾಜ್ಯಾದ್ಯಂತ ಹರಡಿಸಿದೆ. ಶಾಲೆಯ ಆಡಳಿತ ಮಂಡಳಿಯ, ಸಿಬ್ಬಂದಿಯ ಹಾಗೂ ಪಾಲಕರ ನಿರಂತರ ಪ್ರೋತ್ಸಾಹದ ಮತ್ತು ಕರಾಟೆ ತರಬೇತುದಾರರಾದ ಶ್ರೀ ಲಕ್ಷ್ಮಣ .ವಾಯ್. ಗೌಡರ ಅವರ ತರಬೇತಿ ಹಾಗೂ ವಿದ್ಯಾರ್ಥಿಗಳ ಸತತ ಪ್ರಯತ್ನದ ಫಲವಾಗಿ ನಂದಿ ಅಂತರಾಷ್ಟ್ರೀಯ ವಸತಿ ಶಾಲೆ ಈ ಸಾಧನೆ ಗರಿಯನ್ನು ಮುಡಿಗೇರಿಸಿಕೊಂಡಿದೆ. ಶಾಲೆಯ ಆಡಳಿತ ಮಂಡಳಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.