ಕರಾಮುವಿ ಪ್ರವೇಶಾತಿ ದಿನಾಂಕ ವಿಸ್ತರಣೆ

ಶಿವಮೊಗ್ಗ. ಡಿ.೧೮;: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2020-21ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ, ಎಂ.ಎ/ಎA.ಸಿ.ಜೆ/ಎA.ಕಾA., ಎಂ.ಬಿ.ಎ., ಬಿ.ಎಲ್.ಐ.ಎಸ್ಸಿ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಂ, ಡಿಪ್ಲೋಮಾ ಪ್ರೋಗ್ರಾಂ, ಸರ್ಟಿಫಿಕೇಟ್ ಪ್ರೋಗ್ರಾಂಗಳಿಗೆ ಪ್ರವೇಶಾತಿ ಆರಂಭಗೊAಡಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ್-31ರ ವರೆಗೆ ವಿಸ್ತರಿಸಲಾಗಿದೆ. ಈ ಕೋರ್ಸ್ಗಳ ಪ್ರಥಮ ವರ್ಷದ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ದಂಡ ಶುಲ್ಕವಿಲ್ಲದೆ ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 25ರಷ್ಟು ವಿನಾಯಿತಿ ನೀಡಲಾಗುವುದು. Sಅ/Sಖಿ ವಿದ್ಯಾರ್ಥಿಗಳಿಗೆ ಸೂಕ್ತ ದಾಖಾಲಾತಿಯೊಂದಿಗೆ ಶುಲ್ಕ ವಿನಾಯತಿಯಡಿಯಲ್ಲಿ ಪ್ರವೇಶಾತಿ ನೀಡಲಾಗುವುದು ಹಾಗೂ ಎಲ್ಲ ಸರ್ಕಾರಿ ರಜೆಗಳಲ್ಲೂ ಪ್ರವೇಶಾತಿಗೆ ಅವಕಾಶವಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ|| ಮೋಹನ್‌ರಾಜ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.08182-250367 ಅಥವಾ ವೆಬ್‌ಸೈಟ್ ತಿತಿತಿ.ಞsoumಥಿsuಡಿu.ಚಿಛಿ.iಟಿ ಸಂಪರ್ಕಿಸಬಹುದು.