ಕರುನಾಡ ಪರಿಸರ ಸಂರಕ್ಷಣಾ ವೇದಿಕೆಯಿಂದ 5000 ಸಸಿಗಳನ್ನು ನೆಡುವ ಗುರಿ

ವಿಜಯಪುರ,ಏ.9-ಕರುನಾಡ ಪರಿಸರ ಸಂರಕ್ಷಣಾ ವೇದಿಕೆ,ಬಾಗಾನಗರ ವತಿಯಿಂದ ಸಾಮಾಜಿಕ ವಲಯ ಅರಣ್ಯಧಿಕಾರಿಗಳಾದ ಶ್ರೀಮತಿ ಸರಿನಾ ಸಿಕ್ಕಲಿಕಾರ ಇವರಿಗೆ 5000 ಸಸಿಗಳನ್ನು ಪೂರೈಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾದ್ಯಕ್ಷರಾದ ರಮೇಶ ದಳವಾಯಿ ಮಾತನಾಡಿ, ವೇಗವಾಗಿ ಬೆಳೆಯುತ್ತಿರುವ ಜಾಗತಿಕ ಯುಗದಲ್ಲಿ ಪರಿಸರವನ್ನು ನಾಶಪಡಿಸಿ ಕಾಂಕ್ರೀಟ್ ಕಟ್ಟಡಗಳನ್ನು ಕಟ್ಟುತ್ತಿದ್ದು, ಇದರಿಂದ ತಾಪಮಾನದಲ್ಲಿ ಏರಳಿತ ಕಂಡು ವನ್ಯಜೀವಿಗಳು, ಪಕ್ಷಿಗಳಿ, ಹಾಗೂ ಮಾನವರು ಇನ್ನಿಲದ ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಅದಕ್ಕಾಗಿ ಪ್ರತಿಯೊಂದು ಶಾಲೆ, ರಸ್ತೆ, ಕಚೇರಿ ಆವರಣಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು ಪರಿಸರವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ನಿಮ್ಮಲ್ಲರ ಮೇಲಿದೆ ಎಂದು ತಿಳಿಸಿದರು. ಅದಕ್ಕಾಗಿ ಅರಣ್ಯ ಇಲಾಖೆಗೆ 5000 ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಸಿಗಳನ್ನು ಕೋಲ್ಹಾರ ತಾಲೂಕಿನ ಸರಕಾರಿ ಶಾಲೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ, ಎಲ್ಲ ಸರಕಾರಿ ಕಚೇರಿಗಳಲ್ಲಿ ನೆಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು