ಕರೋನಾ ಆತಂಕದ ನಡುವೆಯೂ ಜಿಲ್ಲೆಯಲ್ಲಿ ಅಭಿವೃದ್ಧಿಕಾರ್ಯ -ಸಚಿವ ಆನಂದಸಿಂಗ್

ಹೊಸಪೇಟೆ ಜೂ3: ಕರೋನಾ ಆತಂಕದ ನಡುವೆಯೂ ಬಳ್ಳಾರಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯವನ್ನು ಆರಂಭಿಸಲಾಗುತ್ತಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತೂವಾರಿ ಸಚಿವ ಆನಂದಸಿಂಗ್ ಹೇಳಿದರು.
ಹೊಸಪೇಟೆಯಲ್ಲಿ ಬುಧುವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿ ಹಂಪಿಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಒಂದು ಎಕರೆ ಪ್ರದೇಶದಲ್ಲಿ ಸುಸಚ್ಚಿತ ಪೊಲೀಸಠಾಣೆಯ ನಿರ್ಮಾಣ ಮಾಡಲಾಗುವುದು ಇದಕ್ಕಾಗಿ ಸರ್ಕಾರ 1.5ಕೋಟಿ ಅನುದಾನ ಬಿಡುಗಡೆ ಮಾಡಿದೆ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲಿಸಿ ಆದಷ್ಟುಬೇಗ ನಿರ್ಮಾಣಕಾರ್ಯ ಆರಂಭಿಸುವುದಾಗಿ ತಿಳಿಸಿದರು.
ಅಂತಯೇ ಹೊಸಪೇಟೆಯ ಬಾಲಕಿಯರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಹಾಗೂ ಮಾಜಿ ಪುರಸಭೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯನ್ನು ಕಾಲೇಜು ರಸ್ತೆಯಲ್ಲಿರುವ ಹಿಂದಿನ ರಾಷ್ಟ್ರೀಯ ಹೆದ್ದಾರಿ ಕಚೇರಿಗೆ ಸೇರಿದ 4 ಎಕರೆ ಪ್ರದೇಶದಲ್ಲಿ ಆತ್ಯಾದುನಿಕ ಸೌಲಭ್ಯಗಳೊಂದಿಗೆ ನಿರ್ಮಾಣ ಮಾಡಲಾಗುವುದು ಸ್ಥಳ ಹಸ್ತಾಂತರ, ಸ್ವಚ್ಛಗೊಳಿಸುವ ಹಾಗೂ ಟೆಂಡರ್ ಪ್ರಕೀಯೆ ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವದು ಎಂದರು.
ಆಧುನಿಕ ಸೌಲಭ್ಯದ ಲ್ಯಾಬ್, ಗ್ರಂಥಾಲಯ, ಕ್ರೀಡಾಂಗಣ ಸೇರಿದಂತೆ ಮಾದರಿ ಕಟ್ಟಡ ನಿರ್ಮಾಣ ಅಂದಾಜು 24 ಕೋಟಿಯಲ್ಲಿ ನಿರ್ಮಿಸಲಾಗುವುದು ಎಂದರು. ಈ ಹಿನ್ನೆಲೆಯಲ್ಲಿಯೇ ಇಂದು ಜಿಲ್ಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲಿಸಲು ಬಂದಿರುವುದಾಗಿ ತಿಳಿಸಿದರು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆರಂಭಿಸುವು ಚಿಂತನೆ ಸರ್ಕಾರದ ಮುಂದಿದೆ ಈ ಹಿನ್ನೆಲೆಯಲ್ಲಿಯೇ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿದ್ದು, ಸ್ಥಳದಲ್ಲಿಯೇ ಕಟ್ಟಡದ ನೀಲನಕ್ಷೆ ಸೇರಿದಂತೆ ಎಲ್ಲಾ ಹಂತದ ಮಾಹಿತಿ ಪಡೆದಿರುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿ ಪವನ ಮಾಲಪಾಟಿ, ಜಿಲ್ಲಾ ಎಸ್ಪಿ ಸೈದುಲ್ಲಾ ಅಡಾವತ್, ಉಪವಿಭಾಗಾಧಿಕಾರಿ ಸಿದ್ಧರಾಮೇಶ್ವರ, ಡಿಎಸ್‍ಪಿ ವಿ.ರಘುಕುಮಾರ ಸೇರಿದಂತೆ ಶಾಲಾ ಕಟ್ಟಡ ನಿರ್ಮಾಣ ಗುತ್ತಿಗೆದಾರ ತಿರುಪತಿ ನಾಯ್ಡು ಇತರರು ಹಾಜರಿದ್ದರು.