ಕರೋನಾ ತಡೆಗೆ ಪ್ರತಿಗ್ರಾಮದಲ್ಲಿ ಟಾಸ್ಕ್ ಫೋರ್ಸ್

ಕೋಲಾರ,ಮೇ.೧೯: ಪ್ರತಿಯೊಂದು ಜೀವವನ್ನೂ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಪ್ರತಿಯೊಂದು ಗ್ರಾಮವೂ ಕೊರೊನಾದಿಂದ ಮುಕ್ತವಾಗುವಂತೆ ಮಾಡಬೇಕು ಎಂಬಸಂಕಲ್ಪದಿಂದ ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಇದಕ್ಕಾಗಿ ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾನ್ಯ ಪ್ರಧಾನ ಮಂತ್ರಿಗಳೊಂದಿಗೆ ಕೋವಿಡ್ ೧೯ (ಕರೋನ ವೈರಸ್) ವಿಡಿಯೋ ಸಂವಾದದಲ್ಲಿ ಭಾಗವಹಿಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್‌ಪರೀಕ್ಷೆಗಳನ್ನು ನಡೆಸಿ, ತ್ವರಿತವಾಗಿ ಸೋಂಕಿತರನ್ನು ಪತ್ತೆ ಹಚ್ಚಿ, ಕೂಡಲೇ ಅವರಿಗೆ ಚಿಕಿತ್ಸೆ ಆರಂಭಿಸುವುದರ ಮೂಲಕ ಕರೋನಾ ತಡೆಗೆ ಸಹಕರಿಸಬೇಕು ಎಂದರು.
ಜಿಲ್ಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿರುವಸೋಂಕಿತರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದೇ ಇರುವವರನ್ನು ಕೋವಿಡ್ ಕೇರ್ ಸೆಂಟರ್‍ಗೆವರ್ಗಾಯಿಸಲಾಗುವುದು. ಕೋವಿಡ್ ದೃಢಪಟ್ಟುಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಆರೋಗ್ಯದ ಸುಧಾರಣೆಯನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಆಗಿಂದಾಗ್ಗೆ ಮನೆ ಭೇಟಿ ನೀಡಿ ಪರಿಶೀಲಿಸಬೇಕು. ಸೋಂಕಿತರು ಮನೆ ಬಿಟ್ಟು ಹೊರಗೆ ತಿರುಗಾಡದಂತೆ ನಿಗಾ ವಹಿಸಬೇಕು. ಹೋಮ್ ಐಸೋಲೇಶನ್‌ನಲ್ಲಿ ಇರುವವರನ್ನು ದೂರವಾಣಿಮುಖಾಂತರ ಆರೋಗ್ಯದ ಬಗ್ಗೆ ಮಾಹಿತಿ ಕಲೆ ಹಾಕಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು. ಖಾಸಗಿಯವರು ಕೋವಿಡ್ ಕೇರ್ ಸೆಂಟರ್ ತೆರೆಯಲು ಸಹಕಾರ ನೀಡುತ್ತೇವೆ. ಅಲ್ಲಿ ಕೆಲಸ ಮಾಡುವ ಆರೋಗ್ಯ ಸಹಾಯಕಿಯರಿಗೆ ಸರ್ಕಾರ ಗೌರವಧನ ನೀಡುತ್ತದೆ ಎಂದು ತಿಳಿಸಿದರು. ಅವಶ್ಯಕ ಸೇವೆ ಅಡಿಯಲ್ಲಿ ಜಿಲ್ಲೆಯಲ್ಲಿ ೩೦ ಕಂಪನಿಗಳು ಕೆಲಸ ಮಾಡುತ್ತಿದ್ದು, ಅಲ್ಲಿನ ಕಾರ್ಮಿಕರಿಗೆ ಸ್ಕ್ರೀನಿಂಗ್ ಮಾಡುವಂತೆ ಸೂಚಿಸಲಾಗಿದೆ. ಒಂದು ವೇಳೆ ಕಾರ್ಮಿಕರಿಗೆ ಕೊರೊನ ಬಂದರೆ ಕಂಪನಿಯವರೇ ಕೋವಿಡ್ ಕೇರ್ ಸೆಂಟರ್ ತೆರೆಯಬೇಕು. ಜಿಲ್ಲೆಯಲ್ಲಿ ಕೋವಿಡ್ ಟೆಸ್ಟ್‌ಗಳ ಸಂಖ್ಯೆ ಹೆಚ್ಚಿಸಲಾಗುವುದು. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತಿದಿನ ೧೫೦೦ ಟೆಸ್ಟ್ ಮಾಡಲಾಗುತ್ತಿತ್ತು, ಇದನ್ನು ೧೮೦೦ಕ್ಕೆ ಹೆಚ್ಚಿಸಲಾಗುವುದು. ಬ್ಲ್ಯಾಕ್ ಫಂಗಸ್‌ಗೆ ಜಾಲಪ್ಪ ಆಸ್ಪತ್ರೆಯಲ್ಲಿ ೩೦ ಬೆಡ್‌ಗಳ ವಾರ್ಡ್ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ. ನಾಗರಾಜ್, ಜಿಲ್ಲಾ ಪೊಲೀಸ್ ವರಿಧಿಕಾರಿಗಳಾದ ಕಾರ್ತಿಕ್ ರೆಡ್ಡಿ, ಕೆ.ಜಿ.ಎಫ್ ಪೊಲೀಸ್ ವರಿಷ್ಟಾಧಿಕಾರಿಗಳಾದ ಇಲಕ್ಕಿಯಾ ಕರುಣಾಕರನ್, ಅಪರ ಜಿಲ್ಲಾಧಿಕಾರಿಗಳಾದ ಡಾ.ಸ್ನೇಹ, ಜಿಲ್ಲಾ
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿಜಯ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಚಾರಿಣಿ, ಡಾ.ವಿಜಯಕುಮಾರಿ ಉಪಸ್ಥಿತರಿದ್ದರು.