ಕರೋನ ತಡೆಯಲು ಎಲ್ಲರೂ ಮಾಸ್ಕ ಧರಿಸಿ: ಶಾಸಕ ಪರಣ್ಣ ಮುನವಳ್ಳಿ ಮನವಿ

ಗಂಗಾವತಿ ಏ 18 : ಕರೋನ ಎರಡನೇ ಅಲೆ ತಡೆಯಲು ಪ್ರತಿಯೊಬ್ಬರೂ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಂಡು, ಕೋವಿಡ್-19 ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ತಾಲೂಕಿನ ಆನೆಗೊಂದಿ ಗ್ರಾಮದಲ್ಲಿ ನವೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಚಿಕಿತ್ಸೆ ನೀಡಬೇಕು ಎಂದರು.
ಈ ವೇಳೆ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ತಾ.ಪಂ ಅಧ್ಯಕ್ಷ ಮಹಮ್ಮದ್ ರಫಿ, ಗ್ರಾ.ಪಂ.ಅಧ್ಯಕ್ಷ ಕೆ.ತಿಮ್ಮಪ್ಪ ಬಾಳೇಕಾಯಿ, ಗ್ರಾ.ಪಂ.ಉಪಾಧ್ಯಕ್ಷ ಸುಶೀಲಾಬಾಯಿ, ತಾ.ಪಂ.ಸದಸ್ಯೆ ಲತಾ ಹೊನ್ನಪ್ಪ, ಕೃಷ್ಣದೇವರಾಯ, ಸಂಗಾಪುರ ಗ್ರಾ.ಪಂ.ಅಧ್ಯಕ್ಷ ಹರೀಶ, ಡಾ.ಸಂತೋಷ , ಜಿ.ಪಂ ಮಾಜಿ ಸದಸ್ಯ ಸಿದ್ದರಾಮಸ್ವಾಮಿ ,ಹೆಚ್.ಸಿ.ಯಾದವ್ ,ಗೌರೀಶ ಬಾಗೋಡಿ ಇದ್ದರು.