ಕರ್ನಾಟಕದಲ್ಲಿ ಮತ್ತೆ ಅರಳುತ್ತೆ ಕಮಲ

ದೇವದುರ್ಗ.ನ.೧೫-ಮುಂಬರುವ ೨೦೨೩ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ದೇವದುರ್ಗದ ಪ್ರವಾಸಿ ಮಂದರಿದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು. ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ್ದು, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಯೋಜನೆಗಳು ಜನರ ಮನಗೆದ್ದಿದ್ದು, ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ನೀಡಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಉತ್ತಮ ಸ್ಥಾನಮಾನ ನೀಡಿ ಗೌರವಿಸಿದೆ.
ಶ್ರೀಶೈಲ ಜಗದ್ಗುರುಗಳ ಜನಜಾಗೃತಿ ಸಮಾವೇಶ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ನ.೨೦ರಂದು ಬಳ್ಳಾರಿಯಲ್ಲಿ ಎಸ್ಟಿ ಸಮಾವೇಶ ಆಯೋಜಿಸಿದ್ದು, ಮುಂದಿನ ದಿನಗಳಲ್ಲಿ ವಿವಿಧ ಸಮುದಾಯಗಳ ಹೆಸರಿನಲ್ಲಿ ೨೦ಸಮಾವೇಶ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಆಡಳಿತ ಜನ ಮೆಚ್ಚುಗೆ ಪಡೆದಿದ್ದು ಹಿಮಾಚಲ ಪ್ರದೇಶ ಹಾಗೂ ಗುಜರಾತ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಶಾಸಕ ಕೆ.ಶಿವನಗೌಡ ನಾಯಕ ಇದ್ದರು.