ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಖಚಿತ : ಶೆಟ್ಟರ್ ಭವಿಷ್ಯ


ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಮಾ. 16 :- ಜಗತ್ತಿನಲ್ಲೇ ಪ್ರಧಾನಿ  ನರೇಂದ್ರ ಮೋದಿ ನಂ.1 ನಾಯಕತ್ವವಿದೆ ಎನ್ನುವುದನ್ನು ನಾನಾ ದೇಶಗಳು ಒಪ್ಪಿಕೊಂಡಿವೆ. ಅಲ್ಲದೆ, ಕೊರೋನಾದಂಥ ಸಂಕಷ್ಟದ ಸಮಯದಲ್ಲಿ ಇಡೀ ದೇಶದ ಜನರಿಗೆ ಉಚಿತ ಲಸಿಕೆ ನೀಡಿ ಜೀವರಕ್ಷಣೆ ಮಾಡಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯ ಕಮಲ ಅರಳುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದರು.
ಪಟ್ಟಣದಲ್ಲಿ ಬುಧವಾರ ನಡೆದ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಭಾಗವಹಿಸಿ ಮಾತನಾಡುತ್ತಾ  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಉತ್ತಮ ಆಡಳಿತದಿಂದಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ 140 ಶಾಸಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಶತಃಸಿದ್ಧ ಎಂದರಲ್ಲದೆ, ಕಾಂಗ್ರೆಸ್ ಆಡಳಿತದಲ್ಲಿ ಕುಸಿತವಾಗಿದ್ದ ದೇಶದ ಆರ್ಥಿಕ ಸ್ಥಿತಿಯನ್ನು ಕಾಪಾಡುವ ಮೂಲಕ ಜಗತ್ತಿನ 5ನೇ ಸ್ಥಾನಕ್ಕೆ ತಂದಿದ್ದಾರೆ ಎಂದರು.
ಶಾಸಕ ಎನ್.ವೆ`.ಗೋಪಾಲಕೃಷ್ಣ ಮಾತನಾಡಿ, ಈ ಹಿಂದೆ ಕೂಡ್ಲಿಗಿ ಕ್ಷೇತ್ರಕ್ಕೆ ಮೊದಲ ಬಾರಿ ಆಗಮಿಸಿ ರ್ಸ್ಪಸಿದ್ದ ಸಂದರ್ಭದಲ್ಲಿ ಕ್ಷೇತ್ರದ ಜನರು ಆಶೀರ್ವಾದ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಶ್ವಾಸನೆಯಲ್ಲಿ ಶೇ.೭೦-೮೦ರಷ್ಟು ಈಡೇರಿಸಿದ್ದೇನೆ. ತಾಲೂಕಿನ 74ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೊಳಿಸುವ ಮಾತು ನೀಡಿದ್ದನ್ನು ಮಾಡಿದ್ದೇನೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ ಸೇರಿರುವ ಜನರನ್ನು ನೋಡಿದರೆ ಮುಂದಿನ ಬಾರಿ ಕೂಡ್ಲಿಗಿಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ಪಕ್ಷದ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಬಿಜೆಪಿ, ರಾಷ್ಟಿಯ ಉಪಾಧ್ಯಾಕ್ಷೆ ಡಿ.ಕೆ.ಅರುಣಾ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್  ಸಂಸದ ವೈ. ದೇವೇಂದ್ರಪ್ಪ, ಎಂಎಲ್ಸಿ ವೈ ಎಂ.ಸತೀಶ್, ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಸಿದ್ಧರಾಜು, ಎಸ್ಟಿಮೋರ್ಚಾ ರಾಜ್ಯ ಕೋಶಾಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾ ಉಪಾಧ್ಯಾಕ್ಷ ಕೆ.ಎಂ.ತಿಪ್ಪೇಸ್ವಾಮಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಮದುರ್ಗ ಸೂರ್ಯಪಾಪಣ್ಣ,  ಮಂಡಲ ಅಧ್ಯಕ್ಷ ಕೆ.ಚನ್ನಪ್ಪ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಗುಂಡುಮುಣುಗು ತಿಪ್ಪೇಸ್ವಾಮಿ, ಪಪಂ ಅಧ್ಯಕ್ಷೆ ಎಂ.ಶಾರದಾಬಾಯಿ, ಉಪಾಧ್ಯಕ್ಷೆ ರೇಣುಕಾ ಎಸ್.ದುರುಗೇಶ್, ಜಿಪಂ ಮಾಜಿ ಅಧ್ಯಕ್ಷೆ ದೀನಾ ಮಂಜುನಾಥ, ಮುಖಂಡರಾದ ಗುಂಡುಮುಣುಗು ಎಸ್.ಪಿ.ಪ್ರಕಾಶ್, ಭೀಮೇಶ, ದುರುಗೇಶ, ಗುಳಿಗಿ ವೀರೇಶ, ಸಚಿನಕುಮಾರ, ಅಜೇಯ, ನಾರಾಯಣ, ಜಿ.ಉಮೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಎಲ್.ಪವಿತ್ರಾ, ಲಕ್ಷ್ಮೀಬಾಯಿಕಾಂತರಾಜ್, ಹುಲಿಕೆರೆ ಗೀತಾ, ಶೋಭಾ ಇತರರಿದ್ದರು.
ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಪಟ್ಟಣದ ಗಾಂಧೀಜಿ  ಚಿತಾಭಸ್ಮವಿರುವ ಹುತಾತ್ಮರ ರಾಷ್ಟಿಯ ಸ್ಮಾರಕಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು. ನಂತರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್, ಮದಕರಿ ವೃತ್ತ, ಕೊತ್ತಲ ಆಂಜನೇಯ ದೇವಸ್ಥಾನ ಮಾರ್ಗದಿಂದ ಹೊಸಪೇಟೆ ರಸ್ತೆಯ ರಾಮಲಿಂಗೇಶ್ವರ ದೇವಸ್ಥಾನದವರೆಗೆ ಮರೆವಣಿಗೆ ನಡೆಯಿತು. ಮಹಿಳಾ ಡೊಳ್ಳು, ಲಂಬಾಣಿ ನೃತ್ಯ ಸೇರಿ ನಾನಾ ಕಲಾತಂಡಗಳು ಹಾಗೂ ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದರು.

One attachment • Scanned by Gmail