ಕರ್ನಾಟಕದ ಬಂಡೀಪುರ ವನ್ಯಧಾಮ ದೇಶದಲ್ಲೇ ಎರಡನೇ ಅತ್ಯುತ್ತಮ ವನ್ಯಧಾಮ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.08- ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ.
ಈ ಕುರಿತು ಬಂಡೀಪುರದಲ್ಲಿ ಸಿಎಫ್ ಓರಮೇಶ್ ಕುಮಾರ್ ಮೂಲಕ ಮಾಹಿತಿ ನೀಡಿದ್ದು,
ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಅತ್ಯುತ್ತಮ ವನ್ಯಧಾಮ ಎಂದು ಎಂಬ ಹಿರಿಮೆಗೆ ಪಾತ್ರವಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ, ವೈಲ್ಡ್ ಲೈಫ್‍ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಮಿನಿಸ್ಟ್ರಿ ಆಫ್‍ಎನ್ವೆನ್ಸೆರ್ಂಟ್ ಆಯಂಡ್ ಫಾರೆಸ್ಟ್ ಸಂಸ್ಥೆಯು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕೈಗೊಂಡ ಕ್ರಮಗಳು, ಪ್ರವಾಸಿಗರು, ಶುಚಿತ್ವ, ಸಿಬ್ಬಂದಿ ಮುಂತಾದ ಅಂಶಗಳ ಮಾನದಂಡಗಳ ಪರಿಗಣಿಸಿ ಸಮೀಕ್ಷೆ ನಡೆಸುತ್ತದೆ ಎಂದು ಅವರು ವಿವರಿಸಿದ್ದಾರೆ.
ಕೇರಳದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೊದಲ ಸ್ಥಾನ, ಬಂಡಿಪುರ ಎರಡನೇ ಸ್ಥಾನ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂರನೇ ಸ್ಥಾನ ಲಭಿಸಿದೆ.