ಕರ್ನಾಟಕದ ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ಪಂಗಡ ಸೇರ್ಪಡೆಗೆ ಕೇಂದ್ರ ಸಂಪುಟ ಒಪ್ಪಿಗೆ

ನವದೆಹಲಿ, ಸರ.14- ಕರ್ನಾಟಕದ ಬೆಟ್ಟ‌‌ ಕುರುಬ ಜಾತಿ ಸೇರಿದಂತೆ ಐದು ರಾಜ್ಯಗಳ ವಿವಿಧ ಜಾತಿಗಳನ್ನು ಎಸ್ ಟಿಗೆ ಸೇರಿಸಲು ಪ್ರಧಾನಿ ನರೇಂದ್ರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸಲಾಗಿದೆ ಎಂದು ಕೇಂದ್ರ‌ ಸಂಸದೀಯ ವ್ಯವಹಾರಗಳ ಸಚಿವ‌ ಪಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
ಈ‌ ಕುರಿತು ಕರ್ನಾಟಕ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ಕೇಂದ್ರ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.
ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು.‌ ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು‌ ಎಂದು ಹೇಳಿದ್ದಾರೆ.