ಕರ್ನಾಟಕ ಕಾನೂನು ಮಹಾವಿದ್ಯಾಲಯದಿಂದ ಪರಿಸರ ದಿನಾಚರಣೆ, ರಕ್ತದಾನ ಶಿಬಿರ

ಕಲಬುರಗಿ:ಆ.21: ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್), ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಹಾಗೂ ನಗರದ ಕರ್ನಾಟಕ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರ ನಗರದ ಶರಣ ನಗರ ಬಡಾವಣೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ದಿನಾಚರಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಜರುಗಿತು.

ಈ ವೇಳೆ ಕರ್ನಾಟಕ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಜೋಮನ್ ಜೋಸೆಫ್, ಮಹಾವಿದ್ಯಾಲಯದ ಕಾರ್ಯದರ್ಶಿ ಜಿಜೋ ಜೋಸ್ ಅವರು ಪ್ರಥಾಮಿಕವಾಗಿ ಕಾರ್ಯಕ್ರಮಕ್ಕೆ ಕಾಲೇಜು ಆವರಣದಲ್ಲಿ ಚಾಲನೆ ನೀಡಿದರು.

ನಂತರ ವಿದ್ಯಾರ್ಥಿಗಳು ಮಣ್ಣು ಸಂರಕ್ಷಿಸುವ ಮೂಲಕ ಪರಿಸರ ಬೆಳಸಿ ನಾಡು ಉಳಿಸಿ ಎಂಬ ಘೋಷ ವಾಕ್ಯದೊಂದಿಗೆ ಸಸ್ಯಿ ಹಚ್ಚಿದ ಬಳಿಕ ನವಜೀವನ ಬ್ಲಾಡ್ ಬ್ಯಾಂಕ್ ಸೆಂಟರ್ ಸಹೋಗದೊಂದಿಗೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಾಗೂ ಬಡಾವಣೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಈ ವೇಳೆ ಕಾಲೇಜು ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.