ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ, ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಕಲಬುರಗಿ,ಮಾ.4-ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ನೂತನ ಸದಸ್ಯತ್ವಕ್ಕಾಗಿ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ ಘಟಕದ ಮಾರ್ಗಸೂಚಿಯಂತೆ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ನೀಡಲಾಗುವುದು. ನಿಬಂಧನೆಗಳ ವಿವರ ನಗರದ ಜಿಪಂ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಪಡೆಯಬಹುದಾಗಿದೆ. ಸಂಘಕ್ಕೆ ಸದಸ್ಯರಾಗ ಬಯಸುವ ಪತ್ರಕರ್ತರು ದಿನಾಂಕ : 02-3-2023 ರಿಂದ ಜಿಲ್ಲಾ ಹಾಗೂ ಆಯಾ ತಾಲೂಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಬಳಿ ಮಾಹಿತಿ ಪಡೆಯಬಹುದಾಗಿದೆ.
ಅರ್ಜಿ ಶುಲ್ಕ 10 ರೂ. ಜೊತೆ 500 ರೂ. ಸದಸ್ಯತ್ವ ಶುಲ್ಕ ಪಡೆಯಲಾಗುವುದು. ಸಂಪಾದಕರಿಂದ ಪಡೆದ ದೃಢೀಕರಣಪತ್ರ ಅರ್ಜಿಗೆ ಕಡ್ಡಾಯವಾಗಿ ಲಗತ್ತಿಸಬೇಕು. 10-3-2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಂತರ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಅರ್ಜಿಗಳನ್ನು ಪತ್ರಿಕಾ ಭವನದಲ್ಲಿ ಪಡೆದುಕೊಂಡು ನಿಗಧಿತ ದಿನಾಂಕದೊಳಗೆ ಸಲ್ಲಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಶಿವರಂಜನ ಸತ್ಯಂಪೇಟೆ ತಿಳಿಸಿದ್ದಾರೆ.