ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ದಾವಣಗೆರೆಯ ದೇವರಾಜ ಅರಸು ಬಡಾವಣೆಯಲ್ಲಿರುವ ಲಯನ್ಸ್ ಭವನದಲ್ಲಿ ಹಮ್ಮಿಕೊಂಡಿದ್ದ ೨೦೨೩ ರ ಪತ್ರಿಕಾ ದಿನಾಚರಣೆ, ಮಾಧ್ಯಮ ಮಾಣಿಕ್ಯ ಪ್ರಶಸ್ತಿ ಪ್ರದಾನ ಮತ್ತು ಪತ್ರಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆಯನ್ನು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಕುಮಾರಿ ನಿರ್ಮಲಾಜೀ ನೆರವೇರಿಸಿದರು. ಈ ವೇಳೆ ಶಾಸಕ ಬಸವರಾಜ್ ಶಿವಗಂಗಾ,ಉದ್ಯಮಿ ಬಿ.ಸಿ ಉಮಾಪತಿ,ಸಂಘದ ಜಿಲ್ಲಾಧ್ಯಕ್ಷ ಇ.ಎಂ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್,ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ ಹಾಗೂ ಸಂಘದ ಸದಸ್ಯರುಗಳು,ಗಣ್ಯರು ಉಪಸ್ಥಿತರಿದ್ದರು.ಇದೇ ವೇಳೆ ಮಾಧ್ಯಮ ಮಾಣಿಕ್ಯ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ನೆರವೇರಿತು.