ಕರ್ನಾಟಕ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಬೀದರ್:ಏ.6: ರಕ್ತದಾನದಿಂದ ಬಡವರ ಜೀವ ಉಳಿಸಲು ಸಾಧ್ಯವಾಗುತ್ತದೆ. ರಕ್ತ ನೀಡಿದರೆ ಅದು ಕಡಿಮೆಯಾಗುವುದಿಲ್ಲ. ಬದಲಾಗಿ ಶರೀರದಲ್ಲಿ ಹೆಚ್ಚಾಗುತ್ತದೆ ಎಂದು ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾದ ಡಾ. ಮಲ್ಲಿಕಾರ್ಜುನ ಹಂಗರಗಿ ತಿಳಿಸಿದರು.
ಕರ್ನಾಟಕ ಕಾಲೇಜು, ಎನ್.ಸಿ.ಸಿ. ಘಟಕ, ಅಪೆಕ್ಸ್ ರಕ್ತದಾನ ಘಟಕ ಹಾಗೂ ನೆಹರೂ ಯುವ ಕೇಂದ್ರ ಬೀದರ ಇವರ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಜರುಗಿದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾಲೇಜಿನ ಎನ್.ಸಿ.ಸಿ. ಘಟಕದ ಅಧಿಕಾರಿ ಎಲ್.ಟಿ. ಅಶ್ವಿನ್ ಚವ್ಹಾಣ ಮಾತನಾಡಿ ಒಟ್ಟು ರಕ್ತದಾನ ಶಿಬಿರದಲ್ಲಿ ನೂರು ಜನ ವಿದ್ಯಾರ್ಥಿಗಳು ಭಾಗವಹಿಸಿ, ಒಟ್ಟು 350 ಮಿ.ಲೀ. ರಕ್ತದಾನ ಮಾಡಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತ ನೀಡಿದ್ದು ಇತರರಿಗೆ ಮಾದರಿಯಾಗಿದೆ ಎಂದರು.
ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿ ಮಯೂರಕುಮಾರ ಗೋರ್ಮೆ, ಆರೋಗ್ಯಾಧಿಕಾರಿ ಡಾ.ಮಲ್ಲಿಕಾರ್ಜುನ, ಲ್ಯಾಬ್ ತಂತ್ರಜ್ಞ ಸುರೇಶ ಸೇರಿದಂತೆ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.