ವಿಜಯಪುರ : ಜೂ.7:ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ತಿಗಣಿಬಿದರಿ ಗ್ರಾಮದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ತಾಲೂಕು ಸಮಿತಿಯ ಹಮ್ಮಿಕೊಂಡ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡ ಮರಾಠಾ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು.
ಈ ಸಭೆಯಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾಧ್ಯಕ್ಷರಾದ ಬಿ.ಬಿ. ಶಿವಾಳಕರ ಮಾತನಾಡುತ್ತ, ಸಮಾಜದ ಅಭಿವೃದ್ಧಿಯ ಬಗ್ಗೆ ಮತ್ತು ನಮ್ಮ ಸಮಾಜಕ್ಕಾಗಿಯೇ ಇರುವ ಸರ್ಕಾರಿ ಸೌಲಭ್ಯಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಓದಿನಲ್ಲಿ ಹೆಚ್ಚಿನ ಉನ್ನತ ಮಟ್ಟದ ವ್ಯಾಸಂವನ್ನು ಮಾಡಿ ತಮ್ಮ ಉನ್ನತವಾದ ಜೀವನವನ್ನು ಕಂಡುಕೊಳ್ಳಬೇಕು. ಹಾಗೂ ಸಮಾಜಕ್ಕೆ ಮಾದರಿಯಾಗಬೇಕೆಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಅದೇ ರೀತಿಯಾಗಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ತಾಲೂಕು ಸಮಿತಿಯ ಅಧ್ಯಕ್ಷರಾದ ರಾಮು ಜಾಧವ ರವರು ಮಾತನಾಡಿ ಸಂಘಟನೆ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ರಾಮಣ್ಣ ಬೋಸ್ಲೆ, ಸದಸ್ಯರಾದ ಅಶೋಕ ಶಿಂಧೆ, ಗಂಗಾರಾಮ ಜಾಧವ, ಅಶೋಕ ವಿಧಾತೆ, ಶಿವಾಜಿ ಕದಂ, ಭೀಮರಾವ್ ಶಿಂಧೆ, ಸಿದ್ದು ನಾಯಕವಾಡಿ, ಸಕಾರಾಮ ಜಾಧವ, ಹಾಗೂ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ವಿಜಯಪುರ: ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂನ್ 8 ರಂದು ಗುರುವಾರ ಕೇಂದ್ರ ಅರೆಸೇನಾ ಪಡೆಗಳ ಮಾಜಿ ಮತ್ತು ಹಾಲಿ ಸೈನಿಕರು ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ.
ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ಕೇಂದ್ರೀಯ ಅರೆಸೇನಾ ಪಡೆಗಳ ಮಾಜಿ ಹಾಗೂ ಹಾಲಿ ಯೋಧರ ಕ್ಷೇಮಾಭಿವೃದ್ಧಿ ಸಂಘ ಸಂಯುಕ್ತಾಶ್ರಯದಲ್ಲಿ ಈ ಶಿಬಿರ ಆಯೋಜಿಸಲಾಗಿದೆ.
ಜೂ. 8 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ತಜ್ಞ ವೈದ್ಯರು ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ, ದೇಹದ ತೂಕ, ನಾಡಿಮಿಡಿತ, ಇ ಸಿ ಜಿ ಹಾಗೂ ಇನ್ನಿತರ ತಪಾಸಣೆಗಳನ್ನು ಉಚಿತವಾಗಿ ನಡೆಸಲಿದ್ದಾರೆ. ಕೇಂದ್ರೀಯ ಅರೆಸೇನಾ ಪಡೆಗಳ ಮಾಜಿ ಹಾಗೂ ಹಾಲಿ ಯೋಧರು ಹಾಗೂ ಯೋಧರ ಕುಟುಂಬ ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂ 8951178777 ಮತ್ತು 9481087009 ಸಂಪರ್ಕಿಸಬಹುದಾಗಿದೆ.