ಕರ್ನಾಟಕ ಗೆಲುವುಇತರ ರಾಜ್ಯಗಳಿಗೂ ನಾಂದಿ

ವಾಷಿಂಗ್ಟನ್,ಜೂ. ೩- ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿರುವುನ್ನು ಪ್ರಸ್ತಾಪ ಮಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ವಿಧಾನಸಭೆ ಚುನಾವಣೆ ಗೆಲುವು ದೇಶದ ಇತರೆ ರಾಜ್ಯಗಳ ಚುನಾವಣೆಯಲ್ಲಿ ಗೆಲುವಿಗೆ ನಾಂದಿ ಹಾಡಲಿದೆ ಎಂದಿದ್ದಾರೆ. ಕರ್ನಾಟಕದ ಗೆಲುವು ಹೆಚ್ಚು ಉತ್ಸಾಹ ತಂದಿದೆ.
ಮುಂದಿನ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ವಿಶ್ವಾಸ ಹೊರಹಾಕಿದ್ದಾರೆ.
ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಅವರ ತಂದೆ, ಅಜ್ಜಿ ಮತ್ತು ಅಜ್ಜ ಪತ್ರಿಕಾಗೋಷ್ಠಿ ನಡೆಸಿದ ಸ್ಥಳದಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು ಕರ್ನಾಟಕ ಗೆಲುವು ನಮಗೆ ಶಕ್ತಿ ನೀಡಿದೆ ಎಂದಿದ್ದಾರೆ.
ಬಿಜೆಪಿಗೆ ಸೋಲು ಖಚಿತ;
ಭಾರತದಲ್ಲಿ ೨೦೨೪ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲಿ ಆಡಳಿತಾರೂಡ ಬಿಜೆಪಿ ಪಕ್ಷವನ್ನು ಪರಾಭವಗೊಳಿಸುವುದಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡಿ ಹೋರಾಟ ಮಾಡಲಿವೆ. ಈ ಮೂಲಕ ಬಿಜೆಪಿಗೆ ಸೋಲಿನ ರುಚಿ ತೋರಿಸುತ್ತೇವೆ ಎಂದಿದ್ದಾರೆ.
ದೇಶದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಮುಂಬರುವ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದಿದ್ದಾರೆ.
ಪ್ರಧಾನಿ ಮೋದಿಯವರ ಸರ್ವಾಧಿಕಾರಿ ಧೋರಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು , ೨೦೨೪ ರಲ್ಲಿ “ಮೂರನೇ ಬಾರಿಗೆ ಗೆಲ್ಲಲು ಸಜ್ಜಾಗಿದ್ದಾರೆ” ಆದರೆ ಅದು ಸಾಧ್ಯವಿಲ್ಲ ಎಂದಿದ್ದಾರೆ.
ಮೂಲತಃ ಉತ್ತರ ಪ್ರದೇಶದ ಅಜಂಗಢ್‌ನ ಭಾರತೀಯ-ಅಮೆರಿಕನ್ ಉದ್ಯಮಿ ಫ್ರಾಂಕ್ ಇಸ್ಲಾಂ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ ಹಲವು ರಾಜ್ಯಗಳ , ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಲಾಗುವುದು ಎಂದು ಭವಿಷ್ಯ ನುಡಿದ್ದಾರೆ.
“ಭಾರತದ ಶೇ ೬೦ ರಷ್ಟು ಜನರು ಬಿಜೆಪಿಗೆ ಮತ ಹಾಕುವುದಿಲ್ಲ, ಅವರ ಕೈಯಲ್ಲಿ ಶಬ್ದದ ಸಾಧನಗಳಿಗೆ ಮತ ಹಾಕುವುದಿಲ್ಲ, ಆದ್ದರಿಂದ ಅವರು ಕೂಗಬಹುದು, ಕಿರುಚಬಹುದು, ಅವರು ಮಾಡಬಹುದು, ವಿರೂಪಗೊಳಿಸಬಹುದು ಎಂದಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ವಿರುದ್ಧ ಮಹಾ ವಿಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ” ಎಲ್ಲಾ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಇದು ಸಂಕೀರ್ಣವಾದ ಚರ್ಚೆಯಾಗಿದೆ ಏಕೆಂದರೆ ನಾವು ಪ್ರತಿಪಕ್ಷಗಳೊಂದಿಗೆ ಸ್ಪರ್ಧಿಸುವ ಸ್ಥಳಗಳಿವೆ. ಆದ್ದರಿಂದ ಸ್ವಲ್ಪ ಕೊಡು ಮತ್ತು ತೆಗೆದುಕೊಳ್ಳುವ ಅಗತ್ಯವಿದೆ. ಆದರೆ ಅದು ಆಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದಿದ್ದಾರೆ.