
ಹರಿಹರ.ಫೆ.23 ; ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಳ್ಳುವುದರಿಂದ ರಾಜ್ಯದ ಸಾಂಸ್ಕೃತಿಕ ಮತ್ತು ಚಾರಿತ್ರಿಕ ಅಂಶ ತಿಳಿಯುವುದರ ಮೂಲಕ ಮುಂದಿನ ದಿನಗಳಲ್ಲಿ ಸಂಶೋಧನೆ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಶಾಸಕ ರಾಮಪ್ಪ ಹೇಳಿದರು ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ದರ್ಶನ 2022–23 ಸಾಲಿನ ಎಂಟನೇ ತರಗತಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಳ್ಳುವುದರಿಂದ ರಾಜ್ಯದ ಸಾಂಸ್ಕೃತಿಕ ಮತ್ತು ಚಾರಿತ್ರಿಕ ಅಂಶ ತಿಳಿಯುವುದರ ಮೂಲಕ ಮುಂದಿನ ದಿನಗಳಲ್ಲಿ ಸಂಶೋಧನೆ ಕೈಗೊಳ್ಳಲು ಅನುಕೂಲವಾಗುತ್ತದೆ. ಇಲ್ಲಿಯವರೆಗೆ ಪುಸ್ತಕದಲ್ಲಿ ಮಾತ್ರ ಓದಿ ತಿಳಿದಿದ್ದ ಸ್ಥಳಗಳಿಗೆ ಭೇಟಿ ನೀಡಿ ಅದರ ಮಹತ್ವ, ಹಿನ್ನೆಲೆ ತಿಳಿದು ಜ್ಞಾನ ಹೆಚ್ಚಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಳ್ಳುವುದರಿಂದ ರಾಜ್ಯದ ಸಾಂಸ್ಕೃತಿಕ ಮತ್ತು ಚಾರಿತ್ರಿಕ ಅಂಶಗಳನ್ನು ತಿಳಿಯುವುದರ ಜೊತೆಗೆ ಸ್ಥಳದ ಇತಿಹಾಸವನ್ನುತಿಳಿದುಕೊಳ್ಳುವುದಕ್ಕೆಸಾಧ್ಯವಾಗುತ್ತದೆಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿರುವ ಕುಟುಂಬದವರಿಗೆ ಸ್ವಯಂ ಪ್ರೇರಿತರಾಗಿ ತಮ್ಮ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ, ತಮ್ಮ ಮಕ್ಕಳಿಗೆ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮದ ಅಡಿಯಲ್ಲಿ ಪ್ರವಾಸ ಕರೆದುಕೊಂಡು ಹೋಗುತ್ತಿರುವುದರಿಂದ ತುಂಬಾ ಸಂತೋಷವಾಗಿದೆ ಎಂದರು.ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರ ಕಂದದವರು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ವರ್ಗದವರು ಜಾಗೃತಿ ವಹಿಸಬೇಕೆಂದು ಕೇಳಿದರು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಏಕೆ ಭೂಮೇಶ್. ಚಂದ್ರಪ್ಪ.ರೇವಣಸಿದ್ದಪ್ಪ ಅಂಗಡಿ. ಈಶಪ್ಪ ಬೂದಾಳ್.ಶಿಕ್ಷಕ ಶಿಕ್ಷಕಿ ವೃಂದದವರು ಶಾಸಕರ ಆಪ್ತ ಕಾರ್ಯದರ್ಶಿ ವಿಜಯಕುಮಾರ್. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪೋಷಕರು ಇದ್ದರು ಮೈಸೂರು ಬೆಂಗಳೂರು ಇತರೆ ಜಿಲ್ಲೆಗಳು ಸೇರಿದಂತೆ 5 ದಿನ ಕರ್ನಾಟಕ ದರ್ಶನ ಪ್ರವಾಸ ಕೈಗೊಳ್ಳಲಾಯಿತು ಪ್ರವಾಸ ಕೈಗೊಂಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಕಿಟ್ ಬ್ಯಾಗ್ ನೀಡಲಾಯಿತು