ಕರ್ನಾಟಕ ಯಕ್ಷಗಾನ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ

ಮಂಗಳೂರು, ನ.೯- ಕರ್ನಾಟಕ ಯಕ್ಷಗಾನ ಅಕಾಡೆಮಿಯ ೨೦೧೯ನೇ ಸಾಲಿನ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಪುಸ್ತಕ ಬಹುಮಾನವನ್ನು ನಗರದ ತುಳು ಸಾಹಿತ್ಯ ಅಕಾಡೆಮಿ ಚಾವಡಿಯಲ್ಲಿ ಭಾನುವಾರ ಪ್ರದಾನ ಮಾಡಲಾಯಿತು. ಯಕ್ಷಗಾನ ವಿದ್ವಾಂಸ ಡಾ. ಚಂದ್ರಶೇಖರ ದಾಮ್ಗೆ ಅವರಿಗೆ ಗೌರವ ಪ್ರಶಸ್ತಿ, ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ, ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅವರಿಗೆ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, “ಅಗರಿ ಮಾರ್ಗ ಕೃತಿಗಾಗಿ ಮದ್ದಳೆಗಾರ ಕೃಷ್ಣಪ್ರಕಾಶ ಉಳಿತ್ತಾಯ ಅವರಿಗೆ ಪುಸ್ತಕ ಬಹುಮಾನ ಪ್ರದಾನ ಮಾಡಲಾಯಿತು. ಯಕ್ಷಗಾನ ವೀರಾಂಜನೇಯ ವೈಭವ (ಸಮಗ್ರ ಹನುಮಾಯನ) ಪುಸ್ತಕಕ್ಕಾಗಿ ಬಹುಮಾನ ಪಡೆದ ಹೊಸ್ತೋಟ ಮಂಜುನಾಥ ಭಾಗವತ ಅವರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಪುಸ್ತಕದ ಪ್ರಕಾಶಕರಾದ ಶ್ರೀ ಗುರುದೇವ ಪ್ರಕಾಶನದ ಯಶವಂತ ವಿಟ್ಲ ಬಹುಮಾನ ಸ್ವೀಕರಿಸಿದರು. ಮೇಯರ್ ದಿವಾಕರ್ ಪಾಂಡೇಶ್ವರ ಕಾರ್ಯಕ್ರಮ ಉದ್ಭಾಟಿಸಿದರು. ಕಸಾಪ ದ.ಕ. ಜಿಲ್ಲಾಧ್ಯಕ್ಷ ತ್ರ ಕುಮಾರ್ ಕಲ್ಕೂರ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್‌ಸಾರ್ ಅತಿಥಿಗಳಾಗಿದ್ದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರಿಜಿಸ್ಟ್ರಾರ್ ಎಚ್.ಎಸ್. ಶಿವರುದ್ರಪ್ಪ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯರಾದ ರಾಧಾಕೃಷ್ಣಕಲ್ಟಾರ್, ಯೋಗೀಶ್ ರಾವ್ ಚಿಗುರುಪಾದೆ, ದಾಮೋದರ ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತರ ವಿವರ ನೀಡಿದರು. ಅಕಾಡೆಮಿ ಸದಸ್ಯ ಸಂಚಾಲಕ ನವನೀತ ಶೆಟ್ಟಿ ಕದ್ರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬಳಿಕ ಯಕ್ಷಗಾನ ಮತ್ತು ತುಳು ಅಕಾಡೆಮಿ ಅಧ್ಯಕ್ಷ ಸದಸ್ಯರಿಂದ ಜಾಂಬವತಿ ಕಲ್ಯಾಣ ತಾಳಮದ್ದಳೆ ನಡೆಯಿತು.