ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರುಗಳಿಂದ ಪ್ರತಿಭಟನೆ

ಕೆ.ಆರ್.ಪೇಟೆ. ಜೂ.11: ಕರ್ನಾಟಕದ ಪ್ರತಿಯೊಬ್ಬ ಪ್ರಜೆಗೂ ಸೆಪ್ಟೆಂಬರ್ ತಿಂಗಳೊಳಗೆ ಎರಡೂ ಡೋಸ್ ಲಸಿಕೆಗಳನ್ನು ನೀಡುವ ಮೂಲಕ ಕೋವಿಡ್ ಮೂರನೇ ಅಲೆಯಿಂದ ಕರ್ನಾಟಕವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರುಗಳು ಹೋಬಳಿ ಮಟ್ಟದಲ್ಲಿ ಪ್ರತಿಭಟನೆ ನಡೆಸಿದರು.
ಈ ಕುರಿತು ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅದ್ಯಕ್ಷ ಡಿ.ಎಸ್.ವೇಣು ಜೂ.10 ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಜನ್ಮದಿನವಾಗಿದ್ದು, ಕರವೇ ಕಾರ್ಯಕರ್ತರು ನಾಡಿನ ಜನರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಸಾಮಾನ್ಯರ ಜೀವ ರಕ್ಷಣೆಯ ಹಕ್ಕೊತ್ತಾಯವನ್ನು ‘ಪ್ರತಿಭಟನಾ ದಿನ’ ವನ್ನಾಗಿ ಆಚರಿಸುತ್ತಿದ್ದೇವೆ.
ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರವೇ ಮೂವತ್ತು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ, ವಾಸ್ತವದಲ್ಲಿ ಕರೋನಾದಿಂದ ಸತ್ತವರ ಸಂಖ್ಯೆ ಇದಕ್ಕಿಂತ ಹಲವು ಪಟ್ಟು ಹೆಚ್ಚಾಗಿದೆ. ಸಾವಿರಾರು ಮಕ್ಕಳು ಅನಾಥರಾಗಿದ್ದಾರೆ. ಮೂರನೇ ಅಲೆಯನ್ನು ತಡೆದುಕೊಳ್ಳುವ ಶಕ್ತಿ ನಮಗಿಲ್ಲ, ಹೀಗಾಗಿ ತ್ವರಿತಗತಿಯಲ್ಲಿ ಲಸಿಕೆ ಕೊಡುವ ಕಾರ್ಯ ನಡೆಯಬೇಕು. ಎಂದು ರಕ್ಷಣಾ ವೇದಿಕೆಯ ಕಾರ್ಯಕರ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.
ಲಸಿಕೆ ಕೊಡಿ ಇಲ್ಲವೇ ಅಧಿಕರ ಬಿಡಿ
ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಲಸಿಕೆ ಕೊಡಿ ಇಲ್ಲವೇ ಅಧಿಕಾರ ಬಿಡಿ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಉಚಿತ ಲಸಿಕೆ
ರಾಜ್ಯದ ಎಲ್ಲ ನಾಗರಿಕರಿಗೂ ಬಡವ-ಶ್ರೀಮಂತನೆಂಬ ಭೇದವಿಲ್ಲದೆ ಉಚಿತವಾಗಿಯೇ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣಕ್ಕೆ ಸಿಗುವ ಲಸಿಕೆಯಿಂದಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿಯೇ ಲಸಿಕೆ ನೀಡಬೇಕು. ಖಾಸಗಿ ಆಸ್ಪತ್ರೆ, ಸಂಸ್ಥೆಗಳಿಗೆ ನೀಡಿರುವ ಶೇ 25 ರಷ್ಟು ವ್ಯಾಕ್ಸಿನ್ ಕೊಳ್ಳುವ ಅವಕಾಶವನ್ನು ರದ್ದುಗೊಳಿಸಿ, ನೂರಕ್ಕೆ ನೂರು ಲಸಿಕೆಗಳು ಉಚಿತವಾಗಿಯೇ, ಸರ್ಕಾರದಿಂದಲೇ ನೀಡಬೇಕು.
ಮನೆಮನೆಗೆ ಲಸಿಕೆ
ಸರ್ಕಾರ ಕೂಡಲೇ ಚುನಾವಣೆ ಸಂದರ್ಭದ ಮತದಾನ ಬೂತ್ ಗಳ ಮಾದರಿಯಲ್ಲಿ ಕೋವಿಡ್ ಲಸಿಕೆ ಬೂತ್ ಸ್ಥಾಪಿಸಬೇಕು. ನೂಕುನುಗ್ಗಲು, ಜನದಟ್ಟಣೆ ಆಗದಂತೆ ಎಲ್ಲ ನಾಗರಿಕರು ಸುಲಭವಾಗಿ ವ್ಯಾಕ್ಸಿನ್ ಪಡೆಯುವಂಥ ಸ್ಥಿತಿ ನಿರ್ಮಾಣ ಮಾಡಬೇಕು. ಸಾಧ್ಯವಾದರೆ ಮನೆಮನೆಗೂ ತೆರಳಿ ಲಸಿಕೆ ನೀಡುವಂಥ ವ್ಯವಸ್ಥೆ ಜಾರಿಗೊಳಿಸಬೇಕು. ಲಸಿಕೆ ನೀಡಿಕೆಗೆ ಸರ್ಕಾರ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕು. ಸ್ಮಾರ್ಟ್ ಫೆÇೀನ್ ಇಲ್ಲದ, ರಿಜಿಸ್ಟ್ರೇಷನ್ ಮಾಡಿಸಲು ಗೊತ್ತಾಗದ ಹಳ್ಳಿಗಾಡಿನ ಜನರ ಸಮಸ್ಯೆ ನೀಗಿಸಬೇಕು.