ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪ್ರವಾಸ

ಕಲಬುರಗಿ,ಆ.02:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ ಅವರು ಯಾದಗಿರಿಯಿಂದ ರಸ್ತೆ ಮೂಲಕ ಇದೇ ಆಗಸ್ಟ್ 4 ರಂದು ಸಂಜೆ 6 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಆಗಸ್ಟ್ 5 ರಂದು ಶನಿವಾರ ಬೆಳಿಗ್ಗೆ ಕಲಬುರಗಿಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಕಲ್ಯಾಣ ಯೋಜನೆಗಳಲ್ಲೊಂದಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.