ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳ ಪ್ರವಾಸ

ಕಲಬುರಗಿ:ಡಿ.27:ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಅವರು ಡಿಸೆಂಬರ್ 29 ರಂದು ಶುಕ್ರವಾರ ಬೆಳಿಗ್ಗೆ 7.30 ಗಂಟೆಗೆ ವಿಜಯಪುರದಿಂದ ಸಿಂದಗಿ, ಕಲಬುರಗಿ, ಹುಮನಾಬಾದ್ ಮಾರ್ಗವಾಗಿ ಬೀದರಕ್ಕೆ ಪ್ರಯಾಣಿಸಿ, ಬೀದರನಲ್ಲಿ ಬೆಳಿಗ್ಗೆ 11.30 ಗಂಟೆಗೆ ದೈಹಿಕ ಶಿಕ್ಷಕರ ಕಾರ್ಯಾಗಾರದಲ್ಲಿ ಭಾಗವಹಿಸಿ ರಾತ್ರಿ ಬೀದರದಲ್ಲಿ ವಾಸ್ತವ್ಯ ಮಾಡುವರು.
ಡಿಸೆಂಬರ್ 30 ರಂದು ಬೆಳಿಗ್ಗೆ 11 ಗಂಟೆಗೆ ಬೀದರದಿಂದ ರಸ್ತೆ ಮೂಲಕ ಕಲಬುರಗಿಗೆ ಆಗಮಿಸುವರು. ನಂತರ ಮಧ್ಯಾಹ್ನ 1.05 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.