ಕರ್ನಾಟಕ ಸರ್ಕಾರ ಖಾಲಿ ಡ್ರಮ್ ಸರ್ಕಾರ: ಗಡಿ ಜಿಲ್ಲೆಯಲ್ಲಿ ನಿಲ್ಲದ ಕಾವೇರಿ ಕಿಚ್ಚು!!

ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.17:- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕಳೆದ 32 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ವಿನೂತನವಾಗಿ ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.
ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಖಾಲಿ ಡ್ರಮ್‍ಗಳನ್ನು ತಲೆ ಮೇಲೆ ಹೊತ್ತುರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದತನಕ ಪ್ರತಿಭಟನಾರ್ಯಾಲಿ ನಡೆಸಿ ಸರ್ಕಾರಗಳ ವಿರುದ್ಧಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದಘೋಷಣೆಕೂಗಿದ ಪ್ರತಿಭಟನಾಕಾರರುಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಖಾಲಿ ಡ್ರಮ್ಮಿನ ಸರ್ಕಾರವಾಗಿದೆ, ಅನ್ಯಾಯದ ಆದೇಶಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಖಾಲಿ ಡ್ರಮ್ಮಿನ ಸಮಿತಿಯಾಗಿದೆಎಂದುಆಕ್ರೋಶ ಹೊರಹಾಕಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವಕ್ರಮವನ್ನು ಖಂಡಿಸಿ 33 ದಿನಗಳಿಂದ ಹೋರಾಟ ಮಾಡಿಕೊಂಡು ಬದಲಾಗುತ್ತಿದೆ, ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವತನಕ ನಾವು ಪ್ರತಿಭಟನೆ ಮಾಡುತ್ತೇವೆಎಂದು ಪ್ರತಿಭಟನಾಕಾರರು ಖಾಲಿ ಡ್ರಮ್ ಪ್ರದರ್ಶನ ಮಾಡಿದರು.
ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇಕಾವೇರಿ ನೀರಿನ ವಿಚಾರದಲ್ಲಿಕ್ಯಾತೆತೆಗೆದುತೀಟೆ ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕುಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿಚಾ.ರಂ.ಶ್ರೀನಿವಾಸಗೌಡ, ಶಾ.ಮುರಳಿ, ಚಾ.ವೆಂ.ರಾಜ್‍ಗೋಪಾಲ್, ನಾಗಣ್ಣದೊಡ್ಡರಾಯಪೇಟೆ, ಇತರರು ಭಾಗವಹಿಸಿದ್ದರು.