
ಕಲಬುರಗಿ,ಫೆ,10:ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಕಾನೂನು ಸೇವಾ ಸಮಿತಿ ಹಾಗೂ ಗುಲಬರ್ಗಾ ನ್ಯಾಯವಾದಿಗಳ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಎರಡನೇ ಮಹಡಿಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಅರಿವು ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ನ್ಯಾಯಾಧೀಶರು ಹಿರಿಯ ನ್ಯಾಯಮೂರ್ತಿ ಎಸ್. ಸುನೀಲ ದತ್ತ ಯಾದವ ಅವರು ಗುರುವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಹೆಚ್.ಸಿ.ಜಿ. ಆಸ್ಪತ್ರೆಯ ವೈದ್ಯರಾದ ಡಾ. ಶಾಂತಲಿಂಗ ನಿಗೂಡಗಿ ಅವರು ಆರೋಗ್ಯ ಅರಿವು ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಜ್ಯೋತಿ ಮೂಲಿಮನಿ, ಎಸ್. ರಾಚಯ್ಯ, ಜಿ. ಬಸವರಾಜ, ಸಿ.ಎಂ.ಜೋಶಿ, ರಾಮಚಂದ್ರ ಡಿ. ಹುದ್ದಾರ ಹಾಗೂ ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಕುಮಾರ ಎಸ್. ಕಡಗಂಚಿ, ಸಂಘಧ ಕಾರ್ಯದರ್ಶಿ ಗೌರೀಶ ಎಸ್. ಕಾಶಂಪೂರ ಹಾಗೂ ಉಪಾಧ್ಯಕ್ಷ ಬಸವರಾಜ ಆರ್. ಮಠ ಉಪಸ್ಥಿತರಿದ್ದರು.