ಕರ್ನಾಟಕ 50 ರ ಸಂಭ್ರಮದಲ್ಲಿ ನಾವಿದ್ದೆವೆ: ಸುರೇಶ ಚನ್ನಶೆಟ್ಟಿ

ಬೀದರ್:ಜ.20: ಮೈಸೂರು ರಾಜ್ಯವು ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಸಂಭ್ರಮದಲ್ಲಿ ನಾವಿದ್ದೆವೆ ಎಂದು ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ಹೇಳಿದರು.
ಅವರು ಶುಕ್ರವಾರ ಬೀದರ ನಗರದಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ. ಪೆÇಲೀಸ್ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಸಂಭ್ರಮ- 50 ಜ್ಯೋತಿ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಅಭಿಮಾನದ ಮಾತುಗಳನ್ನು ಅನೇಕ ಹಿರಿಯ ಸಾಹಿತಿಗಳು ಆಡಿರುವುದನ್ನು ಕೇಳಿದ್ದೆವೆ ಮತ್ತು ಅವರು ಎಲ್ಲಾ ಕನ್ನಡಿಗರನ್ನು ಒಟ್ಟು ಗೂಡಿಸುವ ಕೆಲಸ ಮಾಡಿದ್ದಾರೆ. ಹಿಂದೆ ಮೈಸೂರು ಭಾಗದಲ್ಲಿದ್ದ ನಾವುಗಳು ಡಿ. ದೇವರಾಜ ಅರಸು ಅವರ ಕಾಲದಲ್ಲಿ 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಿದರು ಎಂದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ತನ್ನದೆಯಾದ ಇತಿಹಾಸವಿದೆ ಈ ಭಾಗದಲ್ಲಿ ಅನೇಕ ರಾಜ ಮನೆತನಗಳು ಆಳ್ವಿಕೆ ನಡೆಸಿದರೆ ಬೀದರ ಜಿಲ್ಲೆಯಲ್ಲಿ ಅನೇಕ ರಾಜಮನೆತನಗಳು ಆಳ್ವಿಕೆ ಮಾಡಿದ್ದು ಅವರ ಕಾಲದಲ್ಲಿ ಕಲೆ. ಸಾಹಿತ್ಯ. ಸಂಸ್ಕೃತಿ ಮತ್ತು ಪರಂಪರೆಯಲ್ಲಿ ತನ್ನದೆಯಾದ ಹೆಸರು ಮಾಡಿದ ಜಿಲ್ಲೆ ನಮ್ಮದಾಗಿದೆ ಎಂದರು.
ಬಸವಣ್ಞನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೆನೆ. ಇಂದಿನ ಈ ರಥಯಾತ್ರೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು. ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಶಾಲಾ ಕಾಲೇಜಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದಕ್ಕೆ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಹೇಳಿದರು.
ಕರ್ನಾಟಕ ಸಂಭ್ರಮ- 50 ರ ಜ್ಯೋತಿ ರಥಯಾತ್ರೆ ಗುಂಪಾದಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ನಡೆಯಿತು ಇದರಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ. ಹೆಚ್ಚುವರಿ ಪೆÇಲೀಸ್ ಅಧಿಕ್ಷಕರಾದ ಮಹೇಶ್ ಮೆಘಣ್ಣವರ. ವಿರೂಪಾಕ್ಷ ಗಾದಗಿ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಚಂದ್ರಕಾಂತ ಶಹಾಬಾದಕರ್. ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಸೇರಿದಂತೆ ವಿವಿಧ ಶಾಲಾ- ಕಾಲೇಜುಗಳ 5000 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಒಂದು ಕಿ.ಮೀ. ಉದ್ದದ ಕನ್ನಡ ಧ್ವಜ ಹಿಡಿದು ಸಾಗಿದರೆ ವಿವಿಧ ಕಲಾತಂಡಗಳು ಕನ್ನಡ ಪರ ವಿವಿಧ ಸಂಘಟನೆಗಳು ಸೇರಿದಂತೆ ಹಲವಾರು ಜನರು ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ ಒಂದು ಕಿ.ಮಿ.ಉದ್ದದ ಕನ್ನಡ ಧ್ಚಜ ಆಕರ್ಷಣೀಯವಾಗಿತ್ತು ಹಾಗೂ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಗೋಡಂಪಳ್ಳಿಯ ಮಕ್ಕಳಿಂದ ಕರ್ನಾಟಕ ಸಂಭ್ರಮ 50 ಲೊಗೋ ಪ್ರದರ್ಶನ ಆಕರ್ಷಣೀಯವಾಗಿತ್ತು ಹಾಗೂ ಪೆÇಲೀಸ್ ಇಲಾಖೆಯಿಂದ ನಡೆದ ಆಕರ್ಷಕ ಪಂಜಿನ ಕವಾಯತ್ತು ಎಲ್ಲರನ್ನು ಮಂತ್ರಮುಗ್ದರನ್ನಾಗಿಸಿತು. ಕರ್ನಾಟಕ ಸಂಭ್ರಮ- 50 ಜೋತಿ ರಥಯಾತ್ರೆಯ ಮೆರವಣಿಗೆ ಬೀದರ ನಗರದಲ್ಲಿ ಅದ್ದೂರಿಯಾಗಿ ಜರುಗಿತು.