
ಕಲಬುರಗಿ:ಮಾ.18:ಜನರ ಬಹುದಿನಗಳ ಬೇಡಿಕೆಯಾದ ಬ್ರಹತ್ ಜವಳಿ ಪಾರ್ಕ್ ಕಲಬುರಗಿಗೆ ಕೇಂದ್ರ ಸರ್ಕಾರ ಕೊನೆಗೂ ಮಂಜೂರು ಮಾಡಿದ್ದು ಇದನ್ನು ಕನ್ನಡ ಭೂಮಿ ಜಾಗೃತಿ ಸಮಿತಿ ಸ್ವಾಗತಿಸುತ್ತದೆ ಎಂದು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರಕಾರವು ದೇಶದಲ್ಲಿ ಎಳು ಕಡೆ ಜವಳಿ ಪಾರ್ಕ್ ಸ್ಥಾಪನೆಗೆ ಮುಂದಾಗಿದ್ದು, ಅದರಲ್ಲಿ ಕಲಬುರಗಿ ಜಿಲ್ಲೆ ಆಯ್ಕೆ ಮಾಡಿಕೊಂಡಿರುವುದರಿಂದ ಇಲ್ಲಿಯ ಜನರಿಗೆ ಸಂತಸ ತಂದಿದೆ.ಕಲ್ಯಾಣ ಕರ್ನಾಟಕ ವಿಭಾಗೀಯ ಕೇಂದ್ರ ಕಲಬುರ್ಗಿಯಲ್ಲಿ ಬ್ರಹತ್ ಜವಳಿ ಪಾರ್ಕ್ ನಿರ್ಮಾಣವಾದರೆ ಲಕ್ಷಾಂತರ ಜನರಿಗೆ ಉದ್ಯೋಗ ಸಿಗುತ್ತದೆ.ವ್ಯಾಪಾರಿಗಳಿಗೂ ಇದರಿಂದ ಮತ್ತಷ್ಟು ಅನುಕೂಲವಾಗಲಿದೆ.ಅಲ್ಲದೆ ಹತ್ತಿ ಬೆಳೆಯುವ ರೈತರಿಗೆ ಹೆಚ್ಚಿನ ಪೆÇ್ರೀತ್ಸಾಹ ಸಿಕ್ಕಿದಂತಾಗುತ್ತದೆ.ಯುವಕರು,ಕಾರ್ಮಿಕರು ಜಿಲ್ಲೆಯಿಂದ ಕೆಲಸಕ್ಕಾಗಿ ಬೇರೆಡೆ ವಲಸೆ ಹೋಗುವುದು ತಪ್ಪುತ್ತದೆ ಎಂದರು.
ಹಲವು ವರ್ಷಗಳಿಂದ ಬೇಡಿಕೆ ಈಡೇರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಣೆ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಲ್ಪ ಮಟ್ಟಿಗಾದರೂ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ.ಇದರ ಜೊತೆಗೆ ಬ್ರಹತ್ ಕೈಗಾರಿಕೆಗಳ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.