ಕಲಬುರಗಿಯಲ್ಲಿ ನೂತನ ವಿಜ್ಞಾನ ಭವನ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನೆರವು: ರೇವೂರ್

ಕಲಬುರಗಿ.ಜ.11: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜನಸಾಮಾನ್ಯರಲ್ಲಿ ವ್ಶೆಜ್ಞಾನಿಕ ಮನೋಭಾವನೆಯನ್ನು ಮೂಡಿಸಲು ಹಾಗೂ ವಿಜ್ಞಾನವನ್ನು ಜನಪ್ರಿಯಗೊಳಿಸಲು ನಗರದಲ್ಲಿ ಉದ್ದೇಶಿತ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವಿಜ್ಞಾನ ಭವನ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನೆರವು ನೀಡುವುದಾಗಿ ಶಾಸಕರು ಹಾಗೂ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ್ ಸಿ ಪಾಟೀಲ್ ರೇವೂರ್ ಅವರು ಘೋಷಿಸಿದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರದ ಎಸ್‍ಜಿಎನ್ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ (ಸ್ಥಿರ ಜೀವನಕ್ಕಾಗಿ ವಿಜ್ಞಾನ ಎಂಬ ಕೇಂದ್ರ ವಿಷಯದಡಿ ಎರಡು ದಿನಗಳ ಕಾಲ ಸಮಾವೇಶದ ಜಿಲ್ಲಾ ಸಂಯೋಜಕರಿಗೆ ಏರ್ಪಡಿಸಿರುವ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ವಿಜ್ಞಾನ ಭವನ ನಿರ್ಮಾಣದಿಂದ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿ, ಶಿಕ್ಷಕ ಮತ್ತು ಜನಸಾಮಾನ್ಯರಿಗೆ ಹೆಚ್ಚು ಉಪಯೋಗವಾಗಲಿದೆ ಎಂದರು.
ರಾಜ್ಯ ವಿಧಾನ ಪರಿಷತ್ ಸದಸ್ಯ ವಿಧಾನ ಪರಿಷತ್ತು ಸದಸ್ಯ ಶಶಿಲ್ ನಮೋಶಿ ಅವರು ಮಾತನಾಡಿ, ವಿಚಾರವಾದಿ ಎಚ್.ನರಸಿಂಹಯ್ಯ್ಯ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಆರಂಭಗೊಂಡ ರಾಜ್ಯ ವಿಜ್ಞಾನಪರಿಷತ್ತು ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಬೆಳೆಸುವುದು, ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರ ನಿರ್ಮೂಲನೆಮೂಲಕವ್ಶೆಜ್ಞಾನಿಕ ಮನೋಭಾವನೆ ಬೆಳೆಸುವ ಉದ್ದೇಶದಿಂದ ಆರಂಭಿಸಿದ ಈ ವಿಜ್ಞಾನ ಸಂಸ್ಥೆಯು ಇಂದುದೇಶದಲಿವಿಜ್ಞಾನವನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.
ಸಮಾವೇಶದ ಮಾರ್ಗದರ್ಶಿ ಕೈಪಿಡಿಯನ್ನು ಸೇಡಂ ಶಾಸಕರೂ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರು ಬಿಡುಗಡೆ ಮಾಡಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳು ವಿಜ್ಞಾನದ ಆಸಕ್ತಿ ಬೆಳೆಸುವ ಮೂಲಕ ಅವರಲ್ಲಿ ವ್ಶೆಜ್ಞಾನಿಕ ಚಿಂತನೆ ಬೆಳೆಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ್ ಕಡ್ಲೇವಾಡ್ ಅವರು ಮಾತನಾಡಿ, ಈ ಸಮಾವೇಶವು ಮಕ್ಕಳಲ್ಲಿ ಸೃಜನಶೀಲತೆ, ಕ್ರಿಯಾಶೀಲತೆ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಕಲ್ಪಿಸುತ್ತದೆ ಎಂದರು.
ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಜಂಟಿ ಕಾರ್ಯದರ್ಶಿ ಬಿ.ಎನ್. ಶ್ರೀನಾಥ್, ಸಮಿತಿ ಸದಸ್ಯ ಡಾ. ಕುಂಟೆಪ್ಪ ಗೌರಿಪುರ, ವಿಶ್ರಾಂತ ಪ್ರಾಧ್ಯಾಪಕ ಡಾ. ವಿ.ಎನ್. ನಾಯಕ್, ಟಿ.ಜಿ. ಪ್ರೇಮಕುಮಾರ್ ಕಾಲೇಜಿನ ಪ್ರಿನ್ಸಿಪಾಲ್ ಶಿವರಾಜ್ ಶೀಲವಂತ್, ಡಾ. ರಾಜಾ ಸಮರಸೇನ್ ಮೋದಿ, ಗುರುಸ್ವಾಮಿ ಹಿರೇಮಠ್, ರಾಜಶೇಖರ್ ಗೌಡ, ಮಹೇಶ್ ದೇವಣಿ, , ಶಿವರಾಜ್ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.