
ಕಲಬುರಗಿ,ಅ.12-ನಗರದಲ್ಲಿ ಬೆಳ್ಳಂ ಬೆಳಿಗ್ಗೆ ಬುಲ್ಡೋಜರ್ ಸದ್ದು ಮಾಡಿದೆ. ಆಶ್ರಯ ಕಾಲೋನಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 40 ಕುಟುಂಬಗಳು ವಾಸವಿದ್ದ ಮನೆಗಳನ್ನು ಜಿಲ್ಲಾಡಳಿತ ನೆಲಸಮ ಮಾಡಿದೆ.
ಸರ್ವೆ ನಂಬರ್ 9/3, ವಾರ್ಡ್ ನಂಬರ್ 23ರಲ್ಲಿ ಆಪರೇಷನ್ ಡೆಮಾಲಿಷ್ ಕಾರ್ಯಾಚರಣೆ ಮಾಡಲಾಗಿದೆ. ಸುಮಾರು 40 ಕುಟುಂಬಗಳು ಹಲವು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಅನಧಿಕೃತವಾಗಿ ನೆಲಸಿದ್ದವು ಎಂದು ತಿಳಿದುಬಂದಿದೆ. ಆದರೆ ಏಕಾಏಕಿ ಮನೆಗಳನ್ನು ನೆಲಸಮ ಮಾಡುವ ಮೂಲಕ ನಮ್ಮನ್ನು ಬೀದಿಗೆ ತಂದು ನಿಲ್ಲಿಸಲಾಗಿದೆ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ.