ಕಲಬುರಗಿಯಲ್ಲಿ ಮಾ. 15 ರಂದು ಫಲಾನುಭವಿಗಳ ಸಮ್ಮೇಳನ : ಸಿಎಂ ಭಾಗಿ

ಕಲಬುರಗಿ: ಮಾ 10: ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇದೆ ಮಾರ್ಚ್ 15ರಂದು ಫಲಾನುಭವಿಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಡಿ ಬದೋಲೆ ತಿಳಿಸಿದರು.
ಅವರು ಶುಕ್ರವಾರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಫಲಾನುಭವಿಗಳ ಸಮ್ಮೇಳನದ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ನಡೆಯುವ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಅಧಿಕಾರಿಗಳು ತಮಗೆ ನಿರ್ವಹಿಸ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ಲೋಪದೋಷಗಳು ಆಗಲಾರದ ಹಾಗೆ ನಿಗಾವಹಿಸಬೇಕೆಂದು ತಿಳಿಸಿದರು. ಅವರು ಬರುವ ಮಾನ್ಯ ಮುಖ್ಯಮಂತ್ರಿಗಳು ಬರುವ ಸಂದರ್ಭದಲ್ಲಿ ಪೆÇೀಲಿಸ್ ಬಂಧೋಬಸ್ತ್ ಸರಿಯಾಗಿ ಮಾಡಬೇಕೆಂದು ವೇದಿಕೆ ಸುತ್ತಲೂ ಯಾವುದೇ ಗಲಭೆಗಳನ್ನು ಆಗಲಾರದ ಹಾಗೆ ನೋಡಿಕೊಳ್ಳಲು ಪೆÇೀಲಿಸ್ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸ್ತುತ, ಭಾರತ ಸಕಾರ ಪ್ರಾಯೋಜಕತ್ವದ ಯೋಜನೆಗೆಳು ಹಾಗೂ ಸ್ವಯಂ ರಾಜ್ಯ ಸರ್ಕಾರದ ಹಲವು ಯೋಜನೆಗಳ ಕಟ್ಟ ಕಡೆಯ ನಾಗರಿಕರನ್ನು ತಲುಪಲು ಸರ್ಕಾರವು ಅವಿರತವಾಗಿ ಕ್ರಮವಹಿಸಿದೆ ಎಂದರು.
ಅಂದು ನಡೆಯುವ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ನಗರ ಗಣ್ಯಮಾನ್ಯ ವ್ಯಕ್ತಿಗಳಿಗೆ ಸೂಕ್ತವಾದ ಸ್ಥಳಗಳನ್ನು ಒಟ್ಟು ಎನ್.ವಿ. ಮೈದಾನದಲ್ಲಿ ನಡೆಯುವ ಕಾರ್ಯಕ್ರಮ ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಪ್ರತಿಯೊಂದು ಇಲಾಖೆಗಳು ತಮಗೆ ನೀಡಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು. ಮಳಿಗೆಗಳನ್ನು ಹಾಕಲು ಮತ್ತು 50,000 ಫಲಾನುಭವಿಗಳನ್ನು ಕರೆ ತರುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು
ಎಲ್ಲರು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಬೇಕು. ವೇದಿಕೆ ಮೇಲೆ ಪ್ರತಿ ಇಲಾಖೆಯಿಂದ ಐದು ಜನ ಫಲಾನುಭವಿಗಳಿ ಕರೆ ತರುವ ವ್ಯವಸ್ಥೆ ಮಾಡಬೇಕೆಂದರು.
ಕುಡಿಯುವ ನೀರಿನ ವ್ಯವಸ್ಥೆ ಊಟದ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಅಧಿಕಾರಿಗಳಿಯಿಂದ ಪ್ರತಿಯೊಂದು ಇಲಾಖೆ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರು ಮಾತನಾಡಿ, ಬಸ್ಸಿನ್ ಸೌಕರ್ಯಗಳನ್ನು ಕಲ್ಪಿಸಲು ಕೆ.ಕೆ.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮ್ಮದ್ ಪಟೇಲ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕಿ ಪಿ ಶುಭ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಎಸ್.ಡಿ., ಅವಟಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದರು.