ಕಲಬುರಗಿಯಲ್ಲಿ 140 ಕೋವಿಡ್ ಲಸಿಕೆ ವಿತರಣೆ ಕೇಂದ್ರ

ಕಲಬುರಗಿ,ಜ.6:ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ 140 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಶೇಖರ್ ಮಾಲಿ ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಕೆಲಸ ಮಾಡಿದ ಅಂಗನವಾಡಿ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ ಸೇರಿ 17,900 ಜನರನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ ಇವರಿಗೆ ಲಸಿಕೆ ನೀಡಲಾಗುವುದು. ಇದಕ್ಕಾಗಿ 125 ಪ್ರಾಥಮಿಕ ಆರೋಗ್ಯ ಕೇಂದ್ರ, 4 ವೈದ್ಯಕೀಯ ಕಾಲೇಜು ಸೇರಿದಂತೆ ತಲಾ ಮೂರು ಕೋಣೆಗಳುಳ್ಳ 140 ಕೇಂದ್ರಗಳನ್ನು ಗುರುತಿಸಲಾಗಿದೆ.
ಲಸಿಕೆ ಸಂಗ್ರಹಿಸಿಡಲು ಮತ್ತು ವಿತರಿಸಲು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಲಸಿಕೆ ವಿತರಣೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ದಿನಾಂಕ ನಿಗದಿಯಾದ ಮೇಲೆ ಮೊದಲ ಹಂತದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಕೆಲಸ ಮಾಡಿದವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.