ಕಲಬುರಗಿ ಅತಿವೃಷ್ಟಿ ಜಿಲ್ಲೆ ಘೋಷಣೆಗೆ ಆಗ್ರಹ

ಕಲಬುರಗಿ,ಸೆ.12-ಕಲಬುರಗಿ ಜಿಲ್ಲೆಯನ್ನು ಅತಿವೃಷ್ಟಿ ಜಿಲ್ಲೆ ಎಂದು ಘೋಷಣೆ ಮಾಡುವಂತೆ ಕರ್ನಾಟಕ ರಾಜ್ಯ ತೊಗರಿ ಬೆಳೆಗಾರರ ಸಂಘ, ನವಕಲ್ಯಾಣ ಕರ್ನಾಟಕ ಬೀಜ ಬೆಳೆಗಾರರ ಸಂಘ ಮತ್ತು ಜಿಲ್ಲಾ ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿವೆ.
ಕರ್ನಾಟಕ ರಾಜ್ಯ ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷ ಬಸವರಾಜ ಇಂಗಿನ್, ನವಕಲ್ಯಾಣ ಕರ್ನಾಟಕ ಬೀಜ ಬೆಳೆಗಾರರ ಸಂಘದ ಅಧ್ಯಕ್ಷ ಚಂದ್ರಶೇಖರ ಹರಸೂರ ಹಾಗೂ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಜಗದೀಶ ಪಾಟೀಲ, ರೈತ ಮುಖಂಡರಾದ ಶಾಮರಾವ ಪಾಟೀಲ, ರಾಜೇಂದ್ರ ಕರೇಕಲ್ ಹಾಗೂ ಮುರಳಿಧರರಾವ ಕುಲಕರ್ಣಿ ಅವರು ಈ ಸಂಬಂಧ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿ ಕಲಬುರಗಿ ಜಿಲ್ಲೆಯನ್ನು ಅತಿವೃಷ್ಟಿ ಜಿಲ್ಲೆ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿದ್ದಾರೆ.
ಅತಿವೃಷ್ಟಿಯಿಂದಾಗಿ ಖರೀಫ್ ಬೆಳೆಗಳಾದ ಹೆಸರು, ಉದ್ದು, ತೊಗರಿ ಬೆಳೆಗಳು ಸಂಪೂರ್ಣ ಹಾಳಾಗಿವೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ಅತಿವೃಷ್ಟಿ ಜಿಲ್ಲೆ ಎಂದು ಘೋಷಿಸಿ ಪ್ರತಿ ಎಕರೆಗೆ 25 ಸಾವಿರ ರೂ.ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.