ಕಲಬುರಗಿ ಜಿಲ್ಲಾ ಉಸ್ತುವಾರಿ ಮುರುಗೇಶ್ ನಿರಾಣಿ ಹೆಗಲಿಗೆ: ಕಲಬುರಗಿಯಲ್ಲಿ ಜ್ಯುವೆಲರಿ ಪಾರ್ಕ್ ಪ್ರಾರಂಭ

ಕಲಬುರಗಿ ,ಮೇ 02: ಕಲ್ಯಾಣ ಕರ್ನಾಟಕ ಕೇಂದ್ರ ಬಿಂದು ಕಲಬುರಗಿಯಲ್ಲಿ ಆಭರಣ ತಯಾರಿಕೆಯ ಘಟಕ ( ಜ್ಯುವೆಲರಿ ಪಾರ್ಕ್)ವನ್ನು ಪ್ರಾರಂಭಿಸಲು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ್ ಆರ್.ನಿರಾಣಿ ಮುಂದಾಗಿದ್ದಾರೆ.
ವಿಶೇಷವೆಂದರೆ ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕವಾದ ಬೆನ್ನಲ್ಲೇ ನಿರಾಣಿ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ಈ ಹಿಂದೆ ಬೀದರ್ ಇಲ್ಲವೇ ಕಲಬುರಗಿಯಲ್ಲಿ ಜ್ಯುವೆಲ್ಲರಿ ಪಾಕ್೯ ಆರಂಭಿಸಲು ಯೋಜನೆ ರೂಪಿಸಲಾಗಿತ್ತು.ಇದೀಗ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಇದೇ ಜಿಲ್ಲೆಯಲ್ಲಿ ತೆರೆಯಲು ಮುಂದಾಗಿದ್ದಾರೆ.
ಹಿಂದುಳಿದ ಕಲ್ಯಾಣ ಕರ್ನಾಟಕವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸುಮಾರು 50 ರಿಂದ 75 ಎಕರೆ ಜಮೀನಿನಲ್ಲಿ ಜ್ಯುವೆಲರಿ ಪಾರ್ಕ್ ನಿರ್ಮಿಸಲು ನಿರ್ಧರಿಸಿದ್ದಾರೆ‌.
ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಜ್ಯುವೆಲರಿ ಪಾರ್ಕ್ ಪ್ರಾರಂಭಿಸಲಿದ್ದು, ಅಭರಣಗಳ‌ ತಯಾರಿಕೆ,ಗ್ರಾಹಕರು ಒಂದೇ ಸೂರಿನಡಿ ಖರೀದಿ
ಇಲ್ಲಿಂದಲೇ ‌ದೇಶ- ವಿದೇಶಕ್ಕೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಒತ್ತು ಕೊಡುವ ಸಂವಿಧಾನದ 371 ನೇ( ಜೆ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ನಿರುದ್ಯೋಗ ನಿವಾರಣೆಗೆ ಒತ್ತು ನೀಡಲಾಗುವುದು.
ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಹಾಗೂ ರೈಲ್ವೆ ಸಂಪರ್ಕ ಸಾಕಷ್ಟು ಉತ್ತಮವಾಗಿದೆ. ದೇಶ- ವಿದೇಶಗಳಿಂದ ಬಂದು ಹೋಗುವವರಿಗೆ ಎಲ್ಲಾ ಸೌಲಭ್ಯಗಳಿವೆ.
ಜಾಗತಿಕ ಮಟ್ಟದಲ್ಲಿ ಕಲಬುರಗಿ ಜಿಲ್ಲೆಯ ‌ ಹೆಸರು ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ
ಜೊತೆಗೆ ರಾಜ್ಯ ಸರಕಾರ ಇನ್ನಷ್ಟು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಮುಂದಾಗಿರುವ ಕಾರಣ ಸಚಿವರು ಈ ನಿಧಾ೯ರಕ್ಕೆ ಬಂದಿದ್ದಾರೆ.

ಅಭಿನಂದನೆ:ತಮ್ಮ ಮೇಲೆ ವಿಶ್ವಾಸವಿಟ್ಡು ಕಲಬುರಗಿ ಜಿಲ್ಲೆಯ ‌ಉಸ್ತುವಾರಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ಇದೇ ವೇಳೆ ನಿರಾಣಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಭಾಗದ ಶಾಸಕರು, ಸಂಸದರು ಸೇರಿದಂತೆ ಪಕ್ಷಾತೀತವಾಗಿ‌ ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ‌ಅಭಿವೃದ್ದಿಗೆ ಪರಿಶ್ರಮಿಸುವುದಾಗಿ ನಿರಾಣಿ ಅವರು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಬಳಿ ಇಂತಹದ್ದೇ ಜಿಲ್ಲೆಯ ಉಸ್ತುವಾರಿ ಕೊಡಬೇಕೆಂದು ಬೇಡಿಕೆ ಇಟ್ಡಿರಲಿಲ್ಲ.ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವಾಗ ಹಾಗೂ ಖಾತೆ ಹಂಚಿಕೆ ಮಾಡುವಾಗಲೂ ಯಾವುದೇ ರೀತಿಯ ಒತ್ತಡ ಹಾಕಿರಲಿಲ್ಲ.ಮೊದಲಿನಿಂದಲೂ ನಾನು ಒಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಹಾಗೂ ಪಕ್ಷದ ನಾಯಕರು ಯಾವುದೇ ಸಂದರ್ಭದಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ.
ಕಲ್ಯಾಣ ಕರ್ನಾಟಕ ಪ್ರದೇಶವನ್ನು ಇನ್ನಷ್ಟು ‌ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

ನಿಯಮ‌ ಪಾಲನೆ ಮಾಡಿ:ಪ್ರಸ್ತುತ ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ -19‌ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ‌ಹೆಚ್ವಾಗುತ್ತಿವೆ.ಜಿಲ್ಲೆಯ ಪ್ರತಿಯೊಬ್ಬರೂ ಸರಕಾರದ ಮಾಗ೯ಸೂಚಿಗಳನ್ನು ಚಾಚೂತಪ್ಪದೆ ನಿಯಮಗಳನ್ನು ಪಾಲನೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕರು ನಿಗಧಿತ ಸಮಯದಲ್ಲಿ ತಮಗೆ ಅಗತ್ಯವಿರುವ ಸಾಮಾನುಗಳನ್ನು‌ ಖರೀದಿಸಬೇಕು.ಉಳಿದ ಸಮಯದಲ್ಲಿ ಮನೆಯಿಂದ ಆಚೆ ಬಾರದೆ,
ಮಾಸ್ಕ್ ಬಳಕೆ, ಸ್ಯಾನಿಟಜರ್ ಹಾಗೂ ಸಾಮಾಜಿಕ ಅಂತರ ಕಾಪಾಡುಕೊಳ್ಳಬೇಕೆಂದು ಸಲಹೆ ಮಾಡಿದರು.
ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸುವುದಾಗಿ‌ ನಿರಾಣಿ ಅವರು ತಿಳಿಸಿದ್ದಾರೆ.