ಕಲಬುರಗಿ ಜಿಲ್ಲೆಯಾದ್ಯಂತ ಕೋವಿಡ್ ಕರ್ಪ್ಯೂ ಜಾರಿ

ಕಲಬುರಗಿ.ಏ.27:ಕೋವಿಡ್ ಎರಡನೇ ಅಲೆ‌ ನಿಯಂತ್ರಣ‌ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಆದೇಶ ದಿ.26-04-2021ರ ನಿರ್ದೇಶನದಂತೆ ಕಲಬುರಗಿ ಜಿಲ್ಲೆಯಾದ್ಯಂತ ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ-12ರ ಬೆಳಿಗ್ಗೆ 6 ಗಂಟೆ ವರೆಗೆ ಕೆಲವೊಂದು ಷರತ್ತಿಗೊಳಪಟ್ಟು ಜಿಲ್ಲೆಯಾದ್ಯಂತ ಕೋವಿಡ್ ಕರ್ಫ್ಯೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.