ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಗೆ ಹಬ್ಬಮತ ಚಲಾಯಿಸುವಂತೆ ಪ್ರಯಾಣಿಕರಲ್ಲಿ ಮನವಿ

ಕಲಬುರಗಿ,ಮೇ.7: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸ್ವೀಪ್ ಸಮಿತಿಯಿಂದ ರವಿವಾರ ಸಂಜೆ ಕಲಬುರಗಿ ರೈಲು ನಿಲ್ದಾಣದಲ್ಲಿ ಮತದಾನದ ಅರಿವು ಮೂಡಿಸುವ ನಗ್ಗೆ ಹಬ್ಬ ಕಾರ್ಯಕ್ರಮ ಆಯೋಜಿಸಿ ಮತದಾನ ಮಾಡುವಂತೆ ಪ್ರಯಾಣಿಕರಲ್ಲಿ ಕೋರಲಾಯಿತು.

ಕಲಬುರಗಿ ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಅವರು ಜನಪದ ಸಂಗೀತದ ಶೈಲಿಯಲ್ಲಿ ಹಾಸ್ಯ ಚಟಾಕಿ ಬಾತಿಸುತ್ತಲೆ, ಮೇ 10 ರಂದು ನಡೆಯುವ ಮತದಾನ ದಿನದಂದು ತಪ್ಪದೇ ಮತದಾನ ಮಾಡಿ ಎಂದು ಕರೆ ನೀಡಿದರು.

ಮತದಾನ ಮಹಾದಾನ. ಸಂವಿಧನಬದ್ಧ ಹಕ್ಕನ್ನು ಚಲಾಯಿಸಿ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು. ಅಮೂಲ್ಯವಾದ ಮತವನ್ನು ಚಲಾಯಿಸುವ ಮೂಲಕ ಕ್ಷೇತ್ರ ಅಭಿವೃದ್ಧಿ ಪಡಿಸುವಲ್ಲಿ ತಮ್ಮ ಪಾತ್ರ ವಹಿಸಿ ಎಂದು ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರಲ್ಲಿ ಮನವಿ ಮಾಡಿದರು.

ಇನ್ನೊಬ್ಬ ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ ಅವರು ಸಹ ತಮ್ಮದೆಯಾದ ಹಾಸ್ಯ ಶೈಲಿಯಲ್ಲಿ ಜನರಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಡಿ. ಬದೋಲೆ ಅವರು ರೈಲ್ವೆ ನಿಲ್ದಾಣದಲ್ಲಿದ್ದ ಜನ ಸಾಮಾನ್ಯರಿಗೆ ಮತದಾನ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದಲ್ಲದೆ ಮತದಾನ ಮಾಡುವಂತೆ ಮನವಿ ಪತ್ರವನ್ನು ಹಂಚಿದರು.

ಕಾಲೇಜು ವಿದ್ಯಾರ್ಥಿನಿಯರಿಂದ ನೃತ್ಯ;

ಮತದಾನ ಜಾಗೃತಿ‌ ಭಾಗವಾಗಿ ಕಾಲೇಜು ವಿದ್ಯಾರ್ಥಿಗಳು ಮತದಾನ‌ದ ಮಹತ್ವ ತಿಳಿಸುವ ಕೈಯಲ್ಲಿ ಭಿತ್ತಿಪತ್ರ ಹಿಡಿದು ನೃತ್ಯಕ್ಕೆ ಹೆಜ್ಜೆ ಹಾಕುತ್ತಾ ಮೇ 10 ರಂದು ತಪ್ಪದೇ ಮತದಾನ ಮಾಡುವಂತೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗ್ರಾಮೀಣ ಕೈಗಾರಿಕೆ) ಉಪನಿರ್ದೇಶಕ ಅಬ್ದುಲ್ ಅಜೀಂ, ರೈಲ್ವೆ ಅಧಿಕಾರಿಗಳಿದ್ದರು.