ಕಲಬುರಗಿ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಪೂರ್ಣಗೊಂಡಿದ್ದಕ್ಕೆ ಸಂಸದ ಡಾ. ಉಮೇಶ್ ಜಾಧವ ಸಂತಸ

ಕಲಬುರಗಿ:ಮೇ.18: ಇಂದು ನಾಗರಿಕ ವಿಮಾನಯಾನ ಸಚಿವಾಲಯದಡಿಯಲ್ಲಿ ಬರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಅಧಿಕೃತವಾಗಿ ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಪೂರ್ಣಗೊಂಡಿದೆ ಎಂದು ಪ್ರಮಾಣೀಕರಿಸಿದ್ದಾರೆ. ಈ ಸೌಲಭ್ಯದಿಂದ ಮುಂಬರುವ ದಿನಗಳಲ್ಲಿ ಹಲವಾರು ವಿಮಾನಯಾನ ಸಂಸ್ಥೆಗಳು ಕಲ್ಬುರ್ಗಿಯಿಂದ ದೇಶದ ವಿವಿಧ ಕಡೆ ಸೇವೆ ಆರಂಭಿಸುವ ನಿಟ್ಟಿನಲ್ಲಿ ಇದೊಂದು ಮಹತ್ವಪೂರ್ಣ ಹೆಜ್ಜೆಯಾಗಿದೆ ಎಂದು ಸಂಸದ ಡಾ ಉಮೇಶ್ ಜಾಧವ ಅವರು ತಿಳಿಸಿದ್ದಾರೆ.
ಸುಮಾರು ಎರಡು ವರ್ಷಗಳ ಹಿಂದೆಯೆ ಪೂರ್ಣಗೊಳ್ಳಬೇಕಾಗಿದ್ದ ಈ ಸೌಲಭ್ಯವು ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿತ್ತು. ನಾನು ಇದರ ಬಗ್ಗೆ ಕೇಂದ್ರದ ಸಚಿವರ ಗಮನಕ್ಕೆ ಹಲವಾರು ಬಾರಿ ಲೋಕಸಭೆಯಲ್ಲಿ ಪ್ರಶ್ನೆ ಕೇಳುವ ಮೂಲಕ ಹಾಗೂ ಲಿಖಿತವಾಗಿ ಪತ್ರ ಬರೆಯುವ ಮೂಲಕ ತಂದಿದ್ದೆ ಅದರ ಪ್ರತಿಫಲವಾಗಿ ಇಂದು ನೈಟ್ ಲ್ಯಾಂಡಿಂಗ್ ಸೌಲಭ್ಯ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಶೀಘ್ರದಲ್ಲಿಯೇ ಕೇಂದ್ರ ಸಚಿವರು ಭೇಟಿ ನೀಡಿ ವಿಮಾನಯಾನ ಸಂಸ್ಥೆಗಳಿಗೆ ಕಲ್ಬುರ್ಗಿಯಿಂದ ಸೇವೆಯನ್ನು ಪ್ರಾರಂಭಿಸಲು ಕೋರುತ್ತೇನೆ.
ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂದಿಯಾ ಹಾಗೂ ನೆಚ್ಚಿನ ಪ್ರಧಾನಿಯಾದ ಶ್ರೀ ನರೇಂದ್ರ ಮೋದಿಜಿ ಅವರನ್ನು ಕಲಬುರ್ಗಿ ಜನತೆ ಪರವಾಗಿ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.