
ದಾವಣಗೆರೆ-ಮೇ.೨೭; ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕಲಾಕುಂಚ ಸಿದ್ದವೀರಪ್ಪ ಬಡಾವಣೆ ಶಾಖೆಯ ಆಶ್ರಯದಲ್ಲಿ ವಿಶ್ವಯೋಗ ದಿನಾಚರಣೆ ಪ್ರಯುಕ್ತ ಸಾರ್ವಜನಿಕವಾಗಿ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಿದ್ದವೀರಪ್ಪ ಬಡಾವಣೆ ಶಾಖೆ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್ ತಿಳಿಸಿದ್ದಾರೆ. ಇತ್ತೀಚಿಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪರಿಕಲ್ಪನೆಗೆ ನಿರ್ಧರಿಸಲಾಯಿತು.ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯಲ್ಲಿ ಜೂನ್ 11 ರಂದು ಸಂಜೆ ಯೋಗ ಶಿಬಿರ ಉದ್ಘಾಟನೆಯಾಗಲಿದ್ದು ನಿರಂತರ 10 ದಿನಗಳ ಕಾಲ ಪ್ರತಿನಿತ್ಯ ಸಂಜೆ 5 ರಿಂದ 6 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಭಾಗವಹಿಸುವ ಆಸಕ್ತ ಸಾರ್ವಜನಿಕರು 9481160476, 9740549009, 9008571113 ಈ ಸನೀಹ ವಾಣಿಗಳಿಗೆ ಸಂಪರ್ಕಿಸಿ ಹೆಚ್ಚಿನ ವಿವರಗಳೊಂದಿಗೆ 05-06-2023ರೊಳಗೆ ಹೆಸರು ನೊಂದಾಯಿಸಬಹುದು. 21-6-2023ರ ವಿಶ್ವಯೋಗ ದಿನಾಚರಣೆಯಂದು ಸಂಜೆ 5 ಗಂಟೆಗೆ ಶಿಬಿರ ಸಮಾರೋಪಗೊಳ್ಳಲಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ತಿಳಿಸಿದ್ದಾರೆ.