ಕಲಾಕುಂಚದಿಂದ 2021 ನೇ ಸಾಲಿನ ದಿನದರ್ಶಿಕೆ ಲೋಕಾರ್ಪಣೆ

ದಾವಣಗೆರೆ, ಡಿ.೨೮; ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಮೂವತ್ತೊಂದನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ 2021ನೇ ಸಾಲಿನ ಹೊಸ ವರ್ಷದ ದಿನದರ್ಶಿಕೆ (ಕ್ಯಾಲೆಂಡರ್)ಯನ್ನು ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪನವರು ಲೋಕಾರ್ಪಣೆ ಮಾಡಿದರು.ದಾವಣಗೆರೆ ತಾಲೂಕು ದೊಡ್ಡಬಾತಿಯ ವಿಶ್ವಗುರು ಭಾರತ ಪ್ರತಿಷ್ಠಾನದ ಪ್ರೇರಣಾ ಮಕ್ಕಳ ಆರೈಕೆ ಕೇಂದ್ರದ ಆವರಣದಲ್ಲಿ ನಡೆದ ಸರಳ ಸಮಾರಂಭದ ವೇದಿಕೆಯಲ್ಲಿ  ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ಕಲಾಕುಂಚ ಡಿ.ಸಿ.ಎಂ. ಶಾಖೆ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶಂಭುಲಿಂಗ ಹೊಸಮನಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ವಿಶ್ವಗುರು ಭಾರತ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ಶಿವಕುಮಾರ್ ಮೇಗಳ ಮನಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲಾಕುಂಚ ಸಂಸ್ಥೆಗಳ ಸದಸ್ಯರು ಪದಾಧಿಕಾರಿಗಳು ಮತ್ತು ಪ್ರೇರಣಾ ಮಕ್ಕಳ ಆರೈಕೆ ಕೇಂದ್ರದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.