ಕಲಾಪಕ್ಕೆ ಅಡ್ಡಿಪಡಿಸಿದರೆ ಕ್ರಮ ಎದುರಿಸಿ: ಜೋಶಿ ತಾಕೀತು

ನವದೆಹಲಿ,ಡಿ.೪-ಸಂಸತ್ತಿನ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿಷಯವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಕಲಾಪಕ್ಕೆ ಅಡ್ಡಿ ಪಡಿಸಿದರೆ ಗಂಭಿರ ಪರಿಣಾಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ

ಪ್ರತಿ ಪಕ್ಷಗಳು ಪ್ರಸ್ತಾಪ ಮಾಡುವ ವಿಷಯಗಳಿಗೆ ಕಾನೂನುನಿ ಚೌಕಟ್ಟಿನ ಒಳಗೆ ಚರ್ಚೆಗೆ ಸರ್ಕಾರ ಸಇದ್ದವಿದೆ ಚರ್ಚೆಗಳಿಗೆ ಸದನದಲ್ಲಿ ರಚನಾತ್ಮಕ ಚರ್ಚೆಗಳಿಗೆ ಅನುಕೂಲಕರ ವಾತಾವರಣದ ಅಗತ್ಯ ಕಲ್ಪಿಸಬೇಕಾಗಿದೆ. ಇಲ್ಲದಿದ್ದರೆ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ರಾಜಕೀಯ ಕಾರ್ಯತಂತ್ರಗಳು ಮತ್ತು ಶಾಸಕಾಂಗ ಆದ್ಯತೆಗಳ ಯುದ್ಧಭೂಮಿಯಾಗಿ ಪರಿವರ್ತನೆಯಾಗಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ

ವಸಾಹತುಶಾಹಿ ಯುಗದ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಮತ್ತು ಚುನಾವಣಾ ಆಯುಕ್ತರನ್ನು ನೇಮಿಸಲು ಚೌಕಟ್ಟನ್ನು ಸ್ಥಾಪಿಸಲು ಮಸೂದೆಗಳನ್ನು ಒಳಗೊಂಡಂತೆ ಮಹತ್ವಾಕಾಂಕ್ಷೆಯ ಶಾಸಕಾಂಗ ಕಾರ್ಯಸೂಚಿಯನ್ನು ಸರ್ಕಾರ ರೂಪಿಸಲು ಮುಂದಾಗಿದೆ ಎಂದಿದ್ಧಾರೆ.

ತೃಣಮೂಲ ಕಾಂಗ್ರೆಸ್ ನೈತಿಕ ಸಮಿತಿಯ ವರದಿಯ ಮೇಲೆ ಚರ್ಚೆಗೆ ಒತ್ತಾಯಿಸುತ್ತಿರುವುದರಿಂದ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದ್ದಾರೆ.

ಆರಂಭದ ದಿನವೆ ಪ್ರತಿಭಟನೆಯ ಮೂಲಕ ಅಧಿವೇಶನಕ್ಕೆ ಸ್ವಾಗತ ಸಿಕ್ಕಿದೆ. ಮಣಿಪುರದ ಪರಿಸ್ಥಿತಿ, ಹೆಚ್ಚುತ್ತಿರುವ ಹಣದುಬ್ಬರ, ಮತ್ತು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ “ದುರುಪಯೋಗ”ದ ಬಗ್ಗೆ ಕಳವಳಗಳಂತಹ ಪ್ರಮುಖ ವಿಷಯಗಳ ಕುರಿತು ಚರ್ಚೆ ಪ್ರತಿಪಕ್ಷ ನಾಯಕರು ಒತ್ತಾಯಿಸಿದ್ದಾರೆ