ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಶಾಂತಮೂರ್ತಿ

ಚಾಮರಾಜನಗರ, ಸೆ.22- ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯವಾದ ಕೊಡುಗೆ ನೀಡಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ. ಶಾಂತಮೂರ್ತಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸರಳ ಹಾಗೂ ಸಾಂಕೇತಿಕವಾಗಿ ನಡೆದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಾಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ಥಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ ಯಾಗಿದೆ. ಲೋಕವನ್ನು ವೈಭವಿಕರಿಸುವ ಸಾಂಸ್ಕøತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು.
ವಿಶ್ವಕರ್ಮರು ನಿರ್ಮಿಸಿದ ಕರಕುಶಲ ವಸ್ತುಗಳನ್ನು ಜನ ಸಾಮಾನ್ಯರು ಉಪಯೋಗಿಸುವ ಮೂಲಕ ಅವುಗಳಲ್ಲಿ ಭಗವಂತನನ್ನು ಕಾಣಬಹುದು. ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಮಾತನಾಡಿ ವಿಶ್ವಕರ್ಮರು ಎಲ್ಲಾ ಯುಗಗಳ ಲ್ಲಿಯೂ ಪ್ರಾಮುಖ್ಯತೆಯನ್ನು ಹೊಂದಿರುವುದರಲ್ಲಿ ಇವರ ಶ್ರೇಷ್ಠತೆ, ಬದ್ಧತೆಯನ್ನು ಕಾಣಲಾಗುತ್ತಿದೆ. ಯಾವುದೇ ಕಾಲಗಟ್ಟದ ಇತಿಹಾಸ ತಿಳಿಯಲು ಆ ಪ್ರದೇಶದ ವಾಸ್ತುಶಿಲ್ಪ ಕಲೆಗಳನ್ನು ಅಭ್ಯಾಸ ಮಾಡುವುದರ ಮೂಲಕ ಅರಿಯಬಹುದಾಗಿದೆ. ವಿಶ್ವಕರ್ಮ ಚಿತ್ರಪಟಗಳ ಕೆತ್ತನೆ ಅತಿ ಹೆಚ್ಚು ಶ್ರೀಮಂತಿಕೆಯಿಂದ ಕೂಡಿರುವುದು ಕಂಡುಬರುತ್ತದೆ ಎಂದರು.
ವಿಶ್ವಕರ್ಮರ ಕೆತ್ತನೆ ಕೆಲಸ ಕಾರ್ಯಗಳ ಕಲೆಯನ್ನು ಇಂದಿನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ. ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರದಲ್ಲಿ ಅಮರ ಶಿಲ್ಪಿ ಜಕ್ಕಣ್ಣಚಾರಿ ಅವರು ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ ಎಂದು ಆನಂದ್ ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್. ವಿನಯ್ ಮಾತನಾಡಿ ಭಾರತೀಯ ಸಂಸ್ಕøತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದ್ದು, ಅನೇಕ ಗುಡಿ, ದೇವಸ್ಥಾನ, ಪ್ರಾಚೀನ ಸ್ಮಾರಕಗಳ ನಿರ್ಮಾಣದಿಂದಾಗಿ ಸಮುದಾಯದ ಕಲೆ, ಸಂಸ್ಕøತಿ ಪ್ರಸಿದ್ದಿ ಪಡೆದಿದೆ. ಜನ ಸಮುದಾಯದಕ್ಕೆ ಪೂರಕವಾದ ಕಾರ್ಯಗಳ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿದರು.
ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳಾದ ಧರಣೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಹದೇವಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗಿರೀಶ್, ಸಮಾಜದ ಮುಖಂಡರಾದ ಮಧು, ಬಿ.ಕೆ ಶ್ರೀನಿವಾಸ್ ಮೂರ್ತಿ, ಕನ್ನಡಪರ ಸಂಘಟನೆಯ ಸದಸ್ಯರು, ಲಲಿತಾ ಕಲಾ ಅಕಾಡೆಮಿಯ ಸದಸ್ಯರು ಹಾಗೂ ಉತರೆ ಸಂಘ ಸಂಸ್ಥೆಯ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.