
ವಿಜಯಪುರ ನ.19: ನಮ್ಮ ಕಲೆ ಹಾಗೂ ಸಂಸ್ಕೃತಿ ಇವುಗಳನ್ನು ಸ್ಪರ್ಧೆಗೆ ಮಾತ್ರ ಸೀಮಿತಗೊಳಿಸದೆ ನಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಅಂದಾಗ ಮಾತ್ರ ನಾಡಿನ, ದೇಶದ ಸಂಸ್ಕೃತಿ ಸದೃಢವಾಗಬಲ್ಲದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಬಿ.ಎಲ್.ಡಿ.ಇ. ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಆಯುರ್ವೇದ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಇಂದಿನ ಯುವಕರು ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ, ಕಲೆ ಹಾಗೂ ಸಾಹಿತ್ಯಕ್ಕೆ ಹೆಚ್ಚು ಒತ್ತು ನೀಡುವುದರೊಂದಿಗೆ ಹೆಮ್ಮರವಾಗಿ ಬೆಳೆಸುವಂತಾಗಬೇಕೆಂದು ಹೇಳಿದರು.
ಭಾರತ ಸರಕಾರದ ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯ ಡಾ. ಜಾವಿದ್ ಜಮಾದಾರ ಮಾತನಾಡಿ, ಭಾರತದ ಶ್ರೀಮಂತ ಸಂಸ್ಕೃತಿ ಪೆÇೀಷಿಸುತ್ತ ಸಾರ್ವತ್ರಿಕ ಮೌಲ್ಯಗಳನ್ನು ಜಗತ್ತಿಗೆ ಬಿತ್ತರಿಸುತ್ತಿದೆ. ಅಂತಹ ಮೌಲ್ಯಾಧಾರಿತ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಲು ಇಂದಿನ ಯುವ ಜನಾಂಗ ಹಿಂದೆಟು ಹಾಕುತ್ತಿರುವುದು ವಿμÁದನೀಯ ಸಂಗತಿ. ಪಾಶ್ಚಾತ್ಯ ಸಂಸ್ಕೃತಿಯ ಅತಿಯಾದ ವ್ಯಾಮೋಹದಿಂದ ಯುವಜನತೆ ನಮ್ಮ ಸಂಸ್ಕೃತಿಯ ಬಗ್ಗೆ ಒಲವು ಬೆಳೆಸಿಕೊಳ್ಳುತ್ತಿಲ್ಲ. ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಕರಣೆ ಮಾಡುವುದಕ್ಕಿಂತ ನಮ್ಮ ನೆಲದ ಭವ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು. ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಲು ಪ್ರತಿಯೊಬ್ಬರು ಪಣತೊಡಬೇಕು. ಜಾನಪದ ಕಲೆ ನಮ್ಮ ಪೂರ್ವಜರು ನೀಡಿದ ಅನುಪಮ ಕೊಡುಗೆ ಯುವ ಜನರು ಕಲೆ, ಸಾಹಿತ್ಯದ ಆರಾಧಕರಾಗಬೇಕು. ನಾಡಿನ, ದೇಶದ ಸಂಸ್ಕೃತಿಕ ರಾಯಭಾರಿಗಳಾಗಿ ತನ್ಮೂಲಕ ದೇಶದ ಕೀರ್ತಿ ಪರಂಪರೆ ಬೆಳೆಸಬೇಕೆಂದರು.
ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಅರವಿಂದ ಕೊಪ್ಪ ಮಾತನಾಡಿ, ದೇಶದ ಐಕ್ಯತೆ ಹಾಗೂ ಸುಭದ್ರತೆ ಕಟ್ಟುವಂತಹ ಅಭಿರುಚಿ ಹೊಂದಬೇಕು. ನಮ್ಮ ಬದುಕನ್ನು ಬದಲಾಯಿಸುವ ಬಹುದೊಡ್ಡ ಆಯುಧ ನಮ್ಮ ಕಲೆ ಹಾಗೂ ಸಂಸ್ಕೃತಿ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಬಿ.ಎಲ್.ಡಿ.ಇ. ಆಯುರ್ವೇದಿಕ ಮಹಾವಿದ್ಯಾಲಯದ ಪ್ರಾಚಾರ್ಯ ಕಡ್ಲಿಮಟ್ಟಿ ವಹಿಸಿದ್ದರು. ಅಡಿವೆಪ್ಪ ಸಾಲಗಲ್, ನಾಗರಾಜ ಲಂಬು, ಅಧೀಕ್ಷಕ ಎಸ್.ಬಿ. ಕಡಕಲ್ಲ, ಡಾ.ಎಚ್.ಎಂ.ಮುಜಾವರ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಸಂಜೀವ ಕೋತ, ಸಂತೋಷಕುಮಾರ ನಿಗಡಿ ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೆಶಕ ಎಸ್.ಜಿ. ಲೋಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ಡಿ.ಎನ್. ಧರಿ ವಂದಿಸಿದರು. ಸಂಗೀತಾ ಮಠಪತಿ ಕಾರ್ಯಕ್ರಮ ನಿರೂಪಿಸಿದರು.